ಕರ್ನಾಟಕ

ದಿವಂಗತ ಡಿ.ಕೆ.ರವಿ ಪತ್ನಿಗೆ ಟಿಕೆಟ್‌ಗೆ ಯತ್ನ -ಸೊಸೆಗೆ ಸವಾಲ್ ಹಾಕಿದ ಅತ್ತೆ

Pinterest LinkedIn Tumblr

ತುಮಕೂರು : ಚುನಾವಣೆಯಲ್ಲಿ ನನ್ನ ಮಗನ ಫೋಟೋ-ಹೆಸರು ಬಳಸಿದ್ರೆ ಹುಷಾರ್. ‘ನನ್ನ ಮಗನ ಹೇಸರೇಳಿಕೊಂಡು ಯಾಕೆ‌ ಚುನಾವಣೆಗೆ ನಿಂತ್ಕೋಬೇಕು?, ನಿನಗೆ ಸಾಧ್ಯವಾದರೆ ಸ್ವತ: ನಿನ್ನ ಹೆಸರನ್ನು ಬಳಸಿಕೊಂಡು ಚುನಾವಣೆಗೆ ಸ್ಫರ್ಧಿಸಿ ಗೆಲ್ಲು. ಇದು ದಿ. ಐಎಎಸ್​ ಅಧಿಕಾರಿ ಡಿ.ಕೆ.ರವಿ ಅವರ ತಾಯಿ ತನ್ನ ಸೊಸೆಗೆ ಹಾಕಿದ ಸವಾಲ್.

ರಾಜರಾಜೇಶ್ವರಿ ನಗರದ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್​ ಮತ್ತು ಬಿಜೆಪಿಗೆ ಸವಾಲಾಗಿದ್ದು, ಎರಡೂ ಪಕ್ಷಗಳು ಗೆಲ್ಲಲ್ಲೇ ಬೇಕೆಂಬ ಪಣ ತೊಟ್ಟಿದ್ದು, ಉಪಚುನಾವಣೆಯ ಗೆಲುವಿಗಾಗಿ ಕಾಂಗ್ರೆಸ್​ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಈ ನಿಟ್ಟಿನಲ್ಲಿ ದಿ. ಐಎಎಸ್​ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಕುಸುಮಾರನ್ನು ಕಾಂಗ್ರೆಸ್​ನಿಂದ ಕಣಕ್ಕಿಳಿಸಲು ಪಕ್ಷದ ಹಿರಿಯ ಮುಖಂಡರು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. ಇತ್ತ ಡಿ.ಕೆ.ರವಿ ಮಾವ ಹಾಗೂ ಜೆಡಿಎಸ್ ಮುಖಂಡ ಹನುಮಂತರಾಯಪ್ಪ ತನ್ನ ಮಗಳು ಕುಸುಮಾರಿಗೆ ಒಮ್ಮತದ ಅಭ್ಯರ್ಥಿಯನ್ನಾಗಿಸಿ ಟಿಕೆಟ್​ ಕೊಡಿಸುವಲ್ಲಿ ಯತ್ನಿಸುತ್ತಿದ್ದಾರೆ.

ಈ ವಿಚಾರ ತಿಳಿಯುತ್ತಿದ್ದಂತೆ ಕೋಪಗೊಂಡಿರುವ ಡಿ.ಕೆ.ರವಿ ಅವರ ತಾಯಿ ಗೌರಮ್ಮ, ಚುನಾವಣೆಯಲ್ಲಿ ಅವರು ಏನಾದ್ರೂ ಮಾಡಿಕೊಳ್ಳಲಿ. ಆದರೆ ಚುನಾವಣೆಯಲ್ಲಿ ನನ್ನ ಮಗನ ಫೋಟೋ-ಹೆಸರು ಬಳಸಿದ್ರೆ ಜಾಗ್ರತೆ. ಅಪ್ಪಿತಪ್ಪಿ ನನ್ನ ಮಗನ ಫೋಟೋ ಬಳಸಿಕೊಂಡರೆ ಹುಡುಗರನ್ನು ಕರೆದುಕೊಂಡು ನಾನೇ ಹೋಗಿ ಬೆಂಕಿ‌ ಹಚ್ಚಿಸ್ತೀನಿ ಎಂದು ಎಚ್ಚರಿಕೆ ನೀಡಿದ್ದಾರೆ.

ಸ್ವಗ್ರಾಮ ಕುಣಿಗಲ್​ನ ದೊಡ್ಡಕೊಪ್ಪಲಿನಲ್ಲಿ ತನ್ನ ಸೊಸೆ ವಿರುದ್ಧ ಕಿಡಿಕಾರಿರುವ ಡಿ.ಕೆ. ರವಿ ತಾಯಿ ಗೌರಮ್ಮ, ಡಿ.ಕೆ. ರವಿ ಹೆಂಡ್ತಿ ಅನ್ನೋ‌ ಯೋಗ್ಯತೆಯನ್ನು 6 ವರ್ಷದಲ್ಲೇ ಕಳೆದುಕೊಂಡ್ಲು. ನನ್ನ ಮಗನನ್ನು ಅವತ್ತು ಮಣ್ಣಲ್ಲಿ‌ ಬಿಸಾಕಿ‌ ಹೋದವಳು ಇವತ್ತಿನವರೆಗೂ ಬಂದಿಲ್ಲ. ನನ್ನ ಮಗನ ಜೊತೆ ಅವಳೂ ಹೋಗಿ ಬಿಟ್ಲು ಅಂತ ತಿಳಿದುಕೊಂಡಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನನ್ನ ಮಗನನ್ನು ನಾನು ಕಷ್ಟಪಟ್ಟು ಓದಿಸಿದ್ದೆ. ನನ್ನ‌ ಮಗನ‌ ದುಡ್ಡೆಲ್ಲಾ ನುಂಗಿ ನೀರು ಕುಡಿದಿದ್ದಾಳೆ. ನನ್ನ ಮಗನ‌ ದುಡ್ಡಲ್ಲಿ ಒಂದು ರೂಪಾಯಿ‌ಯನ್ನೂ ನಮ್ಮ ಕಷ್ಟಕ್ಕೆ ಅವಳು ಕೊಡಲಿಲ್ಲ ಎಂದು ಆರೋಪಿಸಿದರು.

Comments are closed.