ಮಂಗಳೂರು ಅಕ್ಟೋಬರ್ 03 : ದ.ಕ.ಜಿಲ್ಲೆಯಲ್ಲಿ ನಿಗಧಿಪಡಿಸಿರುವ 13 ಪರಿಕ್ಷಾ ಕೇಂದ್ರಗಳಲ್ಲಿ ಅಕ್ಟೋಬರ್ 4 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಸ್ಪರ್ಧಾತ್ಮಕ ಪರೀಕ್ಷೆಯು ನಡೆಯಲಿದ್ದು, ಯಾವೂದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ 13 ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜ್ಯಾರಿಗೊಳಿಸಲಾಗಿದೆ.
ಪರೀಕ್ಷೆಯು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು, ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ಮತ್ತು ದುಷ್ಟ ಶಕ್ತಿಗಳು ಪರೀಕ್ಷಾ ಕೇಂದ್ರದ ಪರಿಸರವನ್ನು ಕಲುಷಿತಗೊಳಿಸಿದಂತೆ ನಿಗದಿತ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ನಿಷೇದಾಜ್ಞೆ ಜ್ಯಾರಿಗೊಳಿಸಿ ದ.ಕ ಜಿಲ್ಲೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಡಾ|| ರಾಜೇಂದ್ರ ಕೆ,ವಿ ಆದೇಶ ಹೊರಡಿಸಿರುತ್ತಾರೆ.
ಈ ನಿಷೇಧಾಜ್ಞೆ ಆದೇಶವು ಪರೀಕ್ಷಾ ದಿನದಂದು ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲೂ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.