ಕರಾವಳಿ

ರೂ.1.49 ಕೋಟಿ ಮೌಲ್ಯದ ಸ್ವತ್ತುಗಳನ್ನು ಅದರ ಮಾಲೀಕರಿಗೆ ಹಿಂತಿರುಗಿಸಿದ ಮಂಗಳೂರು ಪೊಲೀಸರು

Pinterest LinkedIn Tumblr

ಮಂಗಳೂರು, ಅಕ್ಟೋಬರ್. 03 : ನಗರದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾದ ಆಭರಣಗಳು, ವಾಹನಗಳು ಸೇರಿದಂತೆ ಕಳವಾದ ಸ್ವತ್ತು ಮರಳಿಸುವ ಕಾರ್ಯಕ್ರಮ ಶನಿವಾರ ಮಂಗಳೂರಿನ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು.

2019-20ನೇ ಸಾಲಿನಲ್ಲಿ ನಗರದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಿಂದ ಸುಮಾರು 9.05 ಕೋಟಿ ರೂ.ಗಳ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಇಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಶ್ ಅವರ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ 2.277 ಕೆಜಿ ಚಿನ್ನ, 25 ದ್ವಿಚಕ್ರ ವಾಹನಗಳು, 19 ಮೊಬೈಲ್ ಫೋನ್, 11 ಇತರ ಆಸ್ತಿಗಳು ಮತ್ತು 48,13,951 ರೂ. ಸೇರಿದಂತೆ 1.49 ಕೋಟಿ ರೂ. ಮೌಲ್ಯದ ಸ್ವತ್ತುಗಳನ್ನು ಅದರ ಮಾಲೀಕರಿಗೆ ಹಸ್ತಾಂತರಿಸಲಾಯಿತು.

ನ್ಯಾಯಾಲಯದಿಂದ ಅನುಮತಿ ಪಡೆದ ನಂತರ 1.49 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಅದರ ನಿಜವಾದ ಮಾಲೀಕರಿಗೆ ಹಿಂದಿರುಗಿಸಲು ಇಲ್ಲಿ ಈ ಕವಾಯತು ನಡೆಸಲಾಯಿತು ಎಂದು ಈ ವೇಳೆ ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಹೇಳಿದರು.

Comments are closed.