ಕರ್ನಾಟಕ

ಸ್ಫೋಟಕ ಪತ್ತೆಯಲ್ಲಿ 6 ವರ್ಷ ಸೇವೆ ಸಲ್ಲಿಸಿದ್ದ ಕೊಡಗಿನ ‘ರ‍್ಯಾಂಬೋ’ ಇನ್ನಿಲ್ಲ

Pinterest LinkedIn Tumblr

ಮಡಿಕೇರಿ: ಕೊಡಗು ಜಿಲ್ಲಾ ಶ್ವಾನದಳದಲ್ಲಿ ಕಳೆದ 6 ವರ್ಷಗಳಿಂದ ಸ್ಫೋಟಕ ಪತ್ತೆ ಕಾರ್ಯ ನಿರ್ವಹಿಸುತ್ತಿದ್ದ ‘ರ‍್ಯಾಂಬೋ’ ಹೆಸರಿನ ಶ್ವಾನವು ಅನಾರೋಗ್ಯದಿಂದ ಮೃತಪಟ್ಟಿದೆ.

ಜಿಲ್ಲಾ ಸಶಸ್ತ್ರದಳದ ಆವರಣದಲ್ಲಿ ಶ್ವಾನದ ಪಾರ್ಥಿವ ಶರೀರಕ್ಕೆ ಇಲಾಖೆ ಅಧಿಕಾರಿಗಳಿಂದ ಪುಷ್ಪಗುಚ್ಛವನ್ನು ಇರಿಸಿ ಸಕಲ ಇಲಾಖಾ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಎಸ್ಪಿ ಕ್ಷಮಾ ಮಿಶ್ರಾ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ರ‍್ಯಾಂಬೋ‌ ಹೆಸರಿನ ಈ ಮೃತ ಶ್ವಾನವು ಕಳೆದ 6 ವರ್ಷಗಳಲ್ಲಿ ಜಿಲ್ಲೆಯ ಹಾಗೂ ಹೊರಜಿಲ್ಲೆಗಳಲ್ಲಿ ನಡೆದ ವಿವಿಧ ಬಂದೋಬಸ್ತ್ ಕರ್ತವ್ಯಗಳ ಸಂದರ್ಭದಲ್ಲಿ 400 ಹೆಚ್ಚು ಸ್ಫೋಟಕ ತಪಾಸಣೆ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Comments are closed.