ಪ್ರಮುಖ ವರದಿಗಳು

5 ದಶಕಗಳಿಂದ ರಾಜಕಾರಣಿ, ಹಾಲಿ ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ನಿಧನ

Pinterest LinkedIn Tumblr

ನವದೆಹಲಿ: ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ಇಂದು (ಗುರುವಾರ) ಆಸ್ಪತ್ರೆಯಲ್ಲಿ ನಿಧನರಾಗಿದ್ದು ಅವರಿಗೆ 74 ವರ್ಷ ವಯಸ್ಸಾಗಿತ್ತು.

ಕಳೆದ ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾದ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆದಿದ್ದು ಆಸ್ಪತ್ರೆಯಲ್ಲಿದ್ದ ಅವರು ಮೃತಪಟ್ಟಿದ್ದಾರೆ ಎಂದು ಪಾಸ್ವಾನ್ ಪುತ್ರ ಚಿರಾಗ್ ಮಾಹಿತಿ ನೀಡಿದ್ದಾರೆ.

ಲೋಕ್ ಜನಶಕ್ತಿ ಪಾರ್ಟಿ(ಎಲ್‌ಜೆಪಿ) ಸಂಸ್ಥಾಪಕ, ದಲಿತ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರು 5 ದಶಕಗಳಿಂದ ರಾಜಕೀಯದಲ್ಲಿ ಸಕ್ರೀಯರಾಗಿದ್ದರು. ಎನ್.ಡಿ.ಎ ಮೈತ್ರಿಕೂಟದಲ್ಲಿದ್ದ ಎಲ್ ಜೆಪಿ ಪಕ್ಷದಿಂದ ಪಾಸ್ವಾನ್ ಅವರು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಈ ಬಗ್ಗೆ ಟ್ಟೀಟ್‌ ಮಾಡಿರುವ ರಾಮ್‌ ವಿಲಾಸ್‌ ಪಾಸ್ವಾನ್‌ ಪುತ್ರ ಚಿರಾಗ್‌ ಪಾಸ್ವಾನ್‌, ‘ಅಪ್ಪಾ, ನೀವು ಈಗ ಜಗತ್ತಿನಲ್ಲಿ ಇಲ್ಲ. ಆದರೆ ನೀವು ಎಲ್ಲೇ ಇರಿ, ನೀವು ಯಾವತ್ತೂ ನನ್ನೊಂದಿಗೆ ಇರುತ್ತೀರಿ. ಮಿಸ್‌ ಯೂ ಪಪ್ಪಾ’ ಎಂದಿದ್ದಾರೆ.

ಇನ್ನು ಕರ್ನಾಟಕ ಸಿಎಂ ಬಿ.ಎಸ್ ಯಡಿಯೂರಪ್ಪ, ಗ್ರಹ ಸಚಿವ ಬಸವರಾಜ್ ಬೊಮ್ಮಾಯಿ ಸಹಿತ ಕೆಪಿಸಿಸಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

Comments are closed.