ಮಂಗಳೂರು: ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪ್ರಕರಣವನ್ನು ಪತ್ತೆ ಮಾಡಿರುವ ಕಸ್ಟಮ್ಸ್ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಾಸರಗೋಡು ನಿವಾಸಿ ಸುಮೇಶ್ ಎಂದು ಹೆಸರಿಸಲಾಗಿದ್ದು, ಆರೋಪಿಯಿಂದ 25,45,920 ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಆರೋಪಿ ಇಲೆಕ್ಟ್ರಿಕಲ್ ಕುಕ್ಕರ್ ಒಳಗಿಟ್ಟು ಚಿನ್ನ ಸಾಗಾಟ ಮಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮುಂದಿನ ತನಿಖೆಗೆ ಒಳಪಡಿಸಲಾಗಿದೆ.