ಕರ್ನಾಟಕ

ಸುಪ್ರೀಂ ಕೋರ್ಟ್‌‌ನಿಂದ ಮಹತ್ವದ ತೀರ್ಪು ಪ್ರಕಟ : ಆರ್‌ಆರ್‌ ನಗರದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಮುನಿರತ್ನರಿಗೆ ಬಿಗ್‌ ರಿಲೀಫ್‌

Pinterest LinkedIn Tumblr

ನವದೆಹಲಿ : ಬೆಂಗಳೂರಿನ ಆರ್.‌ಆರ್. ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದ್ದು, ಇದರಿಂದ ಇದರಿಂದಾಗಿ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಮುನಿರತ್ನ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ತೀವ್ರ ಕುತೂಹಲ ಕೆರಳಿಸಿದ್ದಂತ ಆರ್ ಆರ್ ನಗರ ಉಪ ಚುನಾವಣೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ತುಳಸಿ ಮುನಿರಾಜು ಸಲ್ಲಿಸಿದ್ದಂತ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ಮುನಿರತ್ನಗೆ ಬಿಗ್ ರಿಲೀಫ್ ನೀಡಿದೆ.

ಸುಪ್ರೀಂ ಕೋರ್ಟ್‌ ನ ಈ ತೀರ್ಮಾನದಿಂದಾಗಿ ಈಗಾಗಲೇ ಘೋಷಣೆಯಾಗಿರುವ ಆರ್.‌ಆರ್.‌ ನಗರ ವಿಧಾನಸಭಾ ಕ್ಷೇತ್ರದ ವಿಧಾನಸಭಾ ಉಪ ಚುನಾವಣೆ ನಿಗದಿಯಂತೆ ನಡೆಯಲಿದೆ. ಇಂದು ಈ ಕುರಿತಂತೆ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ನ್ಯಾಯ ಪೀಠವು, ತುಳಸಿ ಮುನಿರಾಜು ಸಲ್ಲಿಸಿದ್ದಂತ ತಕರಾರು ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ರಾಜರಾಜೇಶ್ವರಿನಗರ ಉಪ ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿದಂತೆ ಆಗಿದೆ. ಈ ಮೂಲಕ ಮುನಿರತ್ನಗೂ ಬಿಗ್ ರಿಲೀಫ್ ನೀಡಿದೆ.

ಇಂದು ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಅವರು, ಪ್ರಕರಣದಲ್ಲಿ ಯಾವುದೇ ಹುರುಳು ಇದ್ದಂತೆ ಕಾಣುತ್ತಿಲ್ಲ ಎಂಬುದಾಗಿ ತಿಳಿಸಿ, ತುಳಸಿ ಮುನಿರಾಜುಗೌಡ ಸಲ್ಲಿಸಿದ್ದಂತ ತಕರಾರು ಅರ್ಜಿಯನ್ನು ವಜಾಗೊಳಿಸಿದರು. ರಾಜರಾಜೇಶ್ವರಿನಗರ ಉಪ ಚುನಾವಣೆಗೆ ತಡೆ ನೀಡೋದಕ್ಕೆ ಸಾಧ್ಯವಿಲ್ಲ ಎಂಬುದಾಗಿ ತಿಳಿಸುವ ಮೂಲಕ, ರಾಜರಾಜೇಶ್ವರಿನಗರ ಉಪ ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿದರು.

ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರತಿಕ್ರಿಯಿಸಿದಂತ ಮುನಿರತ್ನ, ನನಗೆ ಈಗಾಗಲೇ ಹೈಕೋರ್ಟ್ ನಲ್ಲಿ ನ್ಯಾಯ ಸಿಕ್ಕಿತ್ತು. ನಾನು ಯಾವುದೇ ಅಪರಾಧ ಮಾಡಿಲ್ಲ ಎಂಬುದಾಗಿ, ಇದನ್ನೇ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ನನಗೆ ನ್ಯಾಯದೊರೆತಿದೆ. ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹವಾಗಿದೆ ಎಂಬುದಾಗಿ ಹೇಳಿದ್ದಾರೆ.

ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮುನಿರತ್ನ ಅವರಿಗೆ ಇನ್ನೂ ಹೈಕಮಾಂಡ್‌ ಹಸಿರು ನಿಶಾನೆ ತೋರಿಸಿಲ್ಲ. ಈ ಮಧ್ಯೆ ಇಂದಿನ ಸುಪ್ರೀಂ ಕೋರ್ಟ್‌ ತೀರ್ಪು ಒಂದಷ್ಟು ಸಮಾಧಾನ ತಂದಿದೆ. ತುಳಸಿ ಮುನಿರಾಜು ಗೌಡ ಸಹ ಬಿಜೆಪಿ ಟಿಕೆಟ್‌‌ಗಾಗಿ ಪ್ರಯತ್ನ ನಡೆಸಿದ್ದು, ಅಂತಿಮವಾಗಿ ಯಾರು ಕಣಕ್ಕಿಳಿಯಲಿದ್ದಾರೆಂಬುದು ಇಂದು ಅಥವಾ ನಾಳೆ ತೀರ್ಮಾನವಾಗುವ ಸಾಧ್ಯತೆ ಇದೆ.

Comments are closed.