ಕರಾವಳಿ

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸೋಂಕು ಪ್ರಕರಣ : ದ.ಕ.ಜಿಲ್ಲಾಧಿಕಾರಿ ಹಾಗೂ ಪತ್ನಿ, ಮಗುವಿಗೆ ಪಾಸಿಟಿವ್

Pinterest LinkedIn Tumblr

ಮಂಗಳೂರು : ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ|ಕೆ.ವಿ. ರಾಜೇಂದ್ರ ಅವರಿಗೆ ಹಾಗೂ ಅವರ ಪರಿವಾರಕ್ಕೆ ಕೋವಿಡ್ ಸೋಂಕು ದೃಢಪಟ್ಟಿದೆ.

ತಮ್ಮ ಜೊತೆಗೆ ಪತ್ನಿ ಹಾಗೂ ಮಗುವಿಗೂ ಪರೀಕ್ಷೆ ನಡೆಸಿದ ಸಂದರ್ಭ ಅವರ ವರದಿಯಲ್ಲೂ ಸೋಂಕು ದೃಢಪಟ್ಟಿದೆ ಹಾಗಾಗಿ ಅವರನ್ನೂ ಹೋಂ ಕ್ವಾರಂಟೈನ್ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿದ್ದು, ಸೋಂಕು ಪರೀಕ್ಷೆಯಲ್ಲಿ ಪ್ರತೀ ದಿನಾ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿದೆ, ಅದುದ್ದರಿಂದ ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಯಂತೆ ಸ್ಯಾನಿಟೈಸರ್ ಬಳಕೆ, ಮಾಸ್ಕ್ ಧರಿಸುವ ಮೂಲಕ ಹಾಗೂ ಸಾಮಾಜಿಕ ಅಂತರಗಳನ್ನು ಪಾಲಿಸಿಕೊಂಡು ಮುನ್ನೆಚ್ಚರಿಕೆ ಕ್ರಮಗಳ ಜೊತೆಗೆ ಜಾಗರೂಕತೆ ವಹಿಸಬೇಕೆಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

ಇದೇ ವೇಳೆ ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಅವರಿಗೂ ಸೋಂಕು ದೃಢಪಟ್ಟಿದ್ದು, ಅವರು ಕೂಡ ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

Comments are closed.