
ಮಂಗಳೂರು, ಅಕ್ಟೋಬರ್.18: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪತ್ತೆಹಚ್ಚಿರುವ ಹಿಂದೂ ಸಂಘಟನೆಯ ಕಾರ್ಯಕರ್ತರು ಬಳಿಕ ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಘಟನೆ ಇಂದು ಮಂಗಳೂರಿನ ಪಂಪ್ ವೆಲ್ – ಪಡೀಲ್ ಬಳಿ ರಸ್ತೆ ಬಳಿ ನಡೆದಿದೆ.
ಆರೋಪಿಗಳು ಕಂಟೆನರ್ನಲ್ಲಿ ಗೋಮಾಂಸ ತುಂಬಿಸಿಕೊಂಡು ಮಂಗಳೂರಿಗೆ ಬರುತ್ತಿದ್ದ ಸಂದರ್ಭ ವಾಹನವನ್ನು ತಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ಮೀನಿನ ವಾಹನದಲ್ಲಿ ಮೀನು ತುಂಬಿಸುವ ಬಾಕ್ಸ್ ಗಳಲ್ಲಿ ಗೋಮಾಂಸ ತುಂಬಿಸಿಕೊಂಡು ಸಾಗಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಹನದಲ್ಲಿದ್ದ ಸುಮಾರು 10 ಟನ್ ದನದ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಈ ಬಗ್ಗೆ ಕಂಕನಾಡಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Comments are closed.