ಕರಾವಳಿ

“ಮಂಗಳೂರು ದಸರಾ ಮಹೋತ್ಸವ”ಕ್ಕೆ ಹರಿದು ಬರುತ್ತಿರುವ ಭಕ್ತಸಾಗರ: ಸರ್ಕಾರದ ಮಾರ್ಗಸೂಚಿಯಂತೆ ದರ್ಶನಕ್ಕೆ ಅವಕಾಶ

Pinterest LinkedIn Tumblr

“ಮಂಗಳೂರು ದಸರಾ ಮಹೋತ್ಸವ”ದಲ್ಲಿ ಶ್ರೀ ಶಾರಾದೆ ಮಾತೆಯ ಇಂದಿನ (ಸೋಮವಾರ) ಅಲಂಕಾರ

ಮಂಗಳೂರು, ಅಕ್ಟೋಬರ್ 19: ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ‘ನಮ್ಮ ದಸರಾ-ನಮ್ಮ ಸುರಕ್ಷೆ’ ಘೋಷವಾಕ್ಯದಡಿ ಹಮ್ಮಿಕೊಳ್ಳಲಾಗಿರುವ “ಮಂಗಳೂರು ದಸರಾ ಮಹೋತ್ಸವ” ವಿಜೃಭಂಣೆಯಿಂದ ನಡೆಯುತ್ತಿದ್ದು, ಸಾವಿರಾರು ಭಕ್ತರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ದೇವರ ಹಾಗೂ ಶಾರದೆ, ಮಹಾಗಣಪತಿ ಮತ್ತು ನವದುರ್ಗೆಯರ ದರ್ಶನ ಪಡೆಯುತ್ತಿದ್ದಾರೆ.

ದಿನನಿತ್ಯ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಬೆಳಗ್ಗೆಯಿಂದ ಸಂಜೆಯವರೆಗೆ ಶ್ರೀ ದೇವರ ಹಾಗೂ ಶಾರದೆ, ಮಹಾಗಣಪತಿ ಮತ್ತು ನವದುರ್ಗೆಯರ ದರ್ಶನಕ್ಕೆ ಭಕ್ತರ ಮಹಾಪೂರವೇ ಹರಿದು ಬರುತ್ತಿದೆ.

ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರದ ಆಡಳಿ ಮಂಡಳಿಯು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.

ಪ್ರತಿನಿತ್ಯ ಮಧ್ಯಾಹ್ನ ಅನ್ನಸಂತರ್ಪಣೆ:

ದೇವರ ಹಾಗೂ ಶಾರಾದೆ, ನವದುರ್ಗೆಯರ ದರ್ಶನಕ್ಕೆ ಬರುವ ಭಕ್ತಾಧಿಗಳಿಗೆ ಪ್ರತಿನಿತ್ಯ ಮಧ್ಯಾಹ್ನ 12.30ರಿಂದ 2.30ರತನಕ ದೇವಸ್ಥಾನದ ನಿರ್ಗಮನ ದ್ವಾರದಲ್ಲಿ ಅನ್ನಪ್ರಸಾದ ಪ್ಯಾಕೇಟ್ ನೀಡಲಾಗುವುದು.

ಕೊವೀಡ್ ಸೋಂಕು ಹಿನ್ನೆಲೆಯಲ್ಲಿ ಮಂಗಳೂರು ದಸರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಕೆಲವೊಂದು ಸೂಚನೆಗಳನ್ನು ನೀಡಲಾಗಿದೆ.

ಸೂಚನೆಗಳು:

6 ವರ್ಷದೊಳಗಿನ ಮಕ್ಕಳನ್ನು ಉತ್ಸವದ 10 ದಿನ ದೇವಳಕ್ಕೆ ಬರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ, ಕ್ಷೇತ್ರಕ್ಕೆ ಆಗಮಿಸುವ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬರಬೇಕು, ಮಾಸ್ಕ್ ಇಲ್ಲದವರಿಗೆ ಪ್ರವೇಶ ಕಡ್ಡಾಯ ನಿಷೇಧ.

ದೇವಸ್ಥಾನ ಪ್ರಾಂಗಣ ಪ್ರವೇಶಿಸುವ ಮೊದಲು ಥರ್ಮಲ್ ಸ್ಕ್ಯಾನ್‌ಗೊಳಪಡಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ದೇವಸ್ಥಾನದ ವಠಾರ, ದೇವಾಲಯದೊಳಗೆ, ದರ್ಬಾರು ಮಂಟಪದಲ್ಲಿ ಮೊಬೈಲ್ ಬಳಕೆ, ಫೋಟೋ, ಸೆಲ್ಫಿ ಕಡ್ಡಾಯ ನಿಷೇಧ.

ಹಿರಿಯ ನಾಗರಿಕರು ಮನೆಯಲ್ಲೇ ದೇವರ ದರ್ಶನಕ್ಕೆ ಅನುಕೂಲವಾಗುವಂತೆ ನೇರ ಪ್ರಸಾರ, ಇವರ ಪರವಾಗಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಲಾಗುವುದು ಎಂದು ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ (ಆಡ್ವಕೇಟ್) ಅವರು ತಿಳಿಸಿದ್ದಾರೆ.

ಪೂಜಾ ಕಾರ್ಯಕ್ರಮಗಳ ವಿವರ :

ಅ.19ರಂದು ಆರ್ಯ ದುರ್ಗಾ ಹೋಮ, ಅ.20ರಂದು ಭಗವತೀ ದುರ್ಗಾ ಹೋಮ, ಅ.21ರಂದು ಕುಮಾರಿ ದುರ್ಗಾ ಹೋಮ, ಅ.22ರಂದು ಅಂಬಿಕಾ ದುರ್ಗಾ ಹೋಮ, ಅ.23ರಂದು ಮಹಿಷ ಮರ್ದಿನಿ ದುರ್ಗಾ ಹೋಮ, ಅ.24ರಂದು ಚಂಡಿಕಾ ಹೋಮ, ಹಗಲೋತ್ಸವ, ಅ.25ರಂದು ಸರಸ್ವತೀ ದುರ್ಗಾ ಹೋಮ, 11.30ಕ್ಕೆ ಗೋಕರ್ಣನಾಥ ದೇವರಿಗೆ ಶತ ಸೀಯಾಳಾಭಿಷೇಕ, ಅ.26ರಂದು ವಾಗೀಶ್ವರಿ ದುರ್ಗಾ ಹೋಮ, ಅ.27ರಂದು ರಾತ್ರಿ 8.00ಕ್ಕೆ ಗುರುಪೂಜೆ ನಡೆಯಲಿದೆ.

ಅ. 26ರಂದು ನವದುರ್ಗೆ, ಶಾರದಾ ವಿಸರ್ಜನೆ:

ಅ.26ರ ಸೋಮವಾರದಂದು ಬೆಳಗ್ಗೆ 10.00ಕ್ಕೆ ವಾಗೀಶ್ವರಿ ದುರ್ಗಾ ಹೋಮ, 1.00ಕ್ಕೆ ಶಿವಪೂಜೆ, 1.15ಕ್ಕೆ ಶ್ರೀ ದೇವಿ ಪುಷ್ಪಾಲಂಕಾರ ಮಹಾಪೂಜೆ, ಉತ್ಸವ, ರಾತ್ರಿ 7.30ರಿಂದ ಪುಷ್ಕರಣಿಯಲ್ಲಿ ಪೂಜೆ ಬಲಿ, ಮಂಟಪ ಬಲಿ, ಮಂಟಪ ಪೂಜೆ, ಶ್ರೀಶಾರದಾ ವಿಸರ್ಜನೆ, ಅವಭೃತ ಸ್ನಾನ ನಡೆಯಲಿದೆ.

Comments are closed.