ಕರಾವಳಿ

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ : ಮಂಗಳೂರಿನ ವಿವಿದೆಡೆಗಳಲ್ಲಿ ಕಾರ್ಯಚರಣೆ

Pinterest LinkedIn Tumblr

ಮಂಗಳೂರು ಅಕ್ಟೋಬರ್ 22 : ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್‍ಮಸಾಲ ಉತ್ಪನ್ನಗಳನ್ನು ಜಗಿದು ಉಗಿಯುವುದರಿಂದ ಕೋವಿಡ್-19 ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಇತರರಿಗೆ ಹರಡುವ ಸಂಭವ ಹೆಚ್ಚಾಗುತ್ತದೆ.

ಈ ಕಾರಣದಿಂದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮಾನುಷ್ಠಾಣಾಧಿಕಾರಿ ಡಾ. ಜಗದೀಶ್ ಹಾಗೂ ಪೊಲೀಸ್ ಇಲಾಖೆಯ ನೇತೃತ್ವದ ತಂಡವು ಅಕ್ಟೋಬರ್ 20ರಂದು ನಗರದ ಬರ್ಕೆ, ಬಲ್ಲಾಲ್ ಬಾಗ್, ಮಣ್ಣಗುಡ್ಡ ಪರಿಸರದಲ್ಲಿ ಕಾರ್ಯಚರಣೆ ನಡೆಸಿ ಸೆಕ್ಷನ್ 4, 6ಎ ಹಾಗೂ 6ಬಿ ಪ್ರಕಾರ 31 ಕೇಸ್ ದಾಖಲಿಸಿ ಸುಮಾರು ರೂ.3150 ದಂಡ ವಿಧಿಸಲಾಯಿತು ಹಾಗೂ ಕಾಯಿದೆ ಕುರಿತಂತೆ ಅಂಗಡಿ ಹಾಗೂ ಹೋಟೇಲ್ ಮಾಲಿಕರಿಗೆ ಮಾಹಿತಿ ನೀಡಲಾಯಿತು.

ಸಮಾಜ ಕಾರ್ಯಕರ್ತೆಶ್ರುತಿ ಸಾಲ್ಯಾನ್, ವಿಜಯ್‍ಕುಮಾರ್, ಬರ್ಕೆ ಠಾಣಾ ಪೊಲೀಸ್ ಸಿಬ್ಬಂದಿ ಪರಶುರಾಮ್ ಹಾಗೂ ವಿದ್ಯಾರವರು ಕಾರ್ಯಚರಣೆಯಲ್ಲಿ ಉಪಸ್ಥಿತರಿದ್ದರು ಎಂದು ಪ್ರಕಟಣೇಯಲ್ಲಿ ತಿಳಿಸಿದ್ದಾರೆ.

Comments are closed.