ಕರಾವಳಿ

ಸಾರ್ವಜನಿಕರಿಂದ ದೂರು ಸ್ವೀಕರಿಸಲು ಜಿಲ್ಲೆಗೆ ಬರಲಿದ್ದಾರೆ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳು

Pinterest LinkedIn Tumblr

ಮಂಗಳೂರು ಅಕ್ಟೋಬರ್ 23 : ದಕ್ಷಿಣಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಅಕ್ಟೋಬರ್ 27, 28, ಮತ್ತು 29 ರಂದು ದ.ಕ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ.

ಅಕ್ಟೋಬರ್ 27 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಮೂಡುಬಿದ್ರೆ ಸರ್ಕಾರಿ ನಿರೀಕ್ಷಣಾ ಮಂದಿರ, ಅಕ್ಟೋಬರ್ 28 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ಸರ್ಕಾರಿ ನಿರೀಕ್ಷಣಾ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಪುತ್ತೂರು ಸರ್ಕಾರಿ ನಿರೀಕ್ಷಣಾ ಮಂದಿರ, ಅಕ್ಟೋಬರ್ 29 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ಸರ್ಕಾರಿ ನಿರೀಕ್ಷಣಾ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2.30 ಗಂಟೆಯಿಂದ ಮಧ್ಯಾಹ್ನ 4.30 ಗಂಟೆಯವರೆಗೆ ಬಂಟ್ವಾಳ ಸರ್ಕಾರಿ ನಿರೀಕ್ಷಣಾ ಮಂದಿರದಲ್ಲಿ ಸಾರ್ವಜನಿಕರಿಂದ ದೂರು ಸ್ವೀಕರಿಸಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್‍ಠಾಣೆ, 2ನೇ ಮಹಡಿ, ಮೂಡಾ ಬಿಲ್ಡಿಂಗ್, ಉರ್ವಾಸ್ಟೋರ್, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು-575006, ದೂ ಸಂ: 0824-2483000 ಸಂಪರ್ಕಿಸು ವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.