ಕರಾವಳಿ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೃಹತ್ ಪ್ರಮಾಣದ ಚಿನ್ನ ಪತ್ತೆ

Pinterest LinkedIn Tumblr

ಮಂಗಳೂರು ಅಕ್ಟೋಬರ್ 24 : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ವಿಮಾನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬೃಹತ್ ಪ್ರಮಾಣದ ಚಿನ್ನ ಪತ್ತೆಯಾಗಿದೆ.

ಬಜ್ಪೆಯಲ್ಲಿರುವ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಮುಹಮ್ಮದ್ ಅಶ್ರಫ್ ಎಂಬ ಆರೋಪಿಯನ್ನು ಬಂಧಿಸಿ 27,36,659 ರೂ. ಮೌಲ್ಯದ 24 ಕ್ಯಾರೆಟ್ ಪರಿಶುದ್ಧತೆಯ 531.390 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.

ಮುಹಮ್ಮದ್ ಅಶ್ರಫ್ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ದುಬೈಯಿಂದ ಪ್ರಯಾಣಿಸಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದು,. ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಬಂಧಿಸಲಾಗಿದೆ.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದ ವೇಳೆ ಈ ಅಕ್ರಮ ಚಿನ್ನ ಸಾಗಾಟ ಪ್ರಕರಣ ಬಯಲಾಗಿದೆ. ಆರೋಪಿಯನ್ನು ಮುಂದಿನ ತನಿಖೆಗೆ ಒಳಪಡಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

Comments are closed.