ಕರ್ನಾಟಕ

ಮೈಸೂರು ದಸರಾ: ಗಜಪಡೆ ಮಾವುತರು, ಕಾವಾಡಿಗಳ ಕುಟುಂಬಕ್ಕೆ ಉಪಹಾರ ಬಡಿಸಿದ ಸಂಸದೆ ಶೋಭಾ..!

Pinterest LinkedIn Tumblr

ಮೈಸೂರು: ಪ್ರತಿವರ್ಷದಂತೆ ಈ ವರ್ಷವೂ ಕೂಡ ಗಜಪಡೆ ಮಾವುತರು ಹಾಗೂ ಕಾವಾಡಿಗಳ ಕುಟುಂಬಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಅವರು ಉಪಹಾರದ ವ್ಯವಸ್ಥೆ ಮಾಡಿದ್ದಾರೆ. ಆಯುಧ ಪೂಜೆ ಹಿನ್ನೆಲೆಯಲ್ಲಿ ಗಜಪಡೆ ಮಾವುತರು ಹಾಗೂ ಕಾವಾಡಿಗಳ ಕುಟುಂಬ ಅರಮನೆ ಆವರಣದಲ್ಲಿಯೇ ಬೀಡು ಬಿಟ್ಟಿದ್ದು ಈ ವೇಳೆ ಶೋಭಾ ಅವರು ಮಾವುತರು ಹಾಗೂ ಕಾವಾಡಿಗಳಿಗೆ ಲಘು ಉಪಹಾರ ಬಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನಾಡ ಹಬ್ಬ ಮೈಸೂರು ದಸರದ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿಯನ್ನು ಚಿನ್ನದ ಅಂಬಾರಿಯ ಮೇಲೆ ಕುಳ್ಳಿರಿಸಿ ನಗರ ಪ್ರದಕ್ಷಿಣೆ ನಡೆಸುವ ಮಾವುತ, ಕಾವಾಡಿಗರ ಜೊತೆ ಬೆಳಗ್ಗಿನ ಉಪಹಾರ ಸೇವಿಸಿದ್ದು ಮೈಸೂರು ಉಸ್ತುವಾರಿ ಸಚಿವಳಾಗಿ ಕೆಲಸ ನಿರ್ವಸಿದ ದಿನದಿಂದ ಮಾವುತರ ಹಾಗೂ ಅವರ ಕುಟುಂಬಸ್ಥರಿಗೆ ಅಂಬಾವಿಲಾಸ ಅರಮನೆಯ ಆವರಣದಲ್ಲಿ ಉಪಹಾರ ವ್ಯವಸ್ಥೆ ಮಾಡುತ್ತಾ ಬಂದಿದ್ದೇನೆ.

ಕೊರೋನಾ ಕಾರಣದಿಂದ, ಸರಕಾರ ಹಾಗೂ ಜಿಲ್ಲಾಡಳಿತದ ಕಠಿಣ ನಿಂಬಂಧನೆಗಳಿರವ ಕಾರಣ ದಸರಾ ವೈಭವಕ್ಕೆ ಕಡಿವಾಣಬಿದ್ದಿದೆ. ಆದರೂ ಪ್ರತೀ ವರ್ಷದಂತೆ ಮಾವುತರಿಗೆ ಉಪಹಾರ ಹಾಗೂ ಅವರನ್ನು ಭೇಟಿಯಾಗುವ ಕಾರ್ಯಕ್ರಮದಲ್ಲಿ ತಪ್ಪದೆ ಪಾಲ್ಗೊಂಡಿದ್ದೇನೆ. ತಾಯಿ ಚಾಮುಂಡೇಶ್ವರಿಯನ್ನು ಚಿನ್ನದ ಅಂಬಾರಿಯಲ್ಲಿ ನಗರ ಪ್ರದಕ್ಷಿಣೆ ನಡೆಸುವ ಮಾವುತರನ್ನು ಭೇಟಿಯಾಗಿರುವುದು ಸಂತೋಷ ತಂದಿದೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Comments are closed.