ಕರಾವಳಿ

ಅ.29ರಂದು ಮೀಲಾದುನ್ನಬಿ: ಯಾವ ರೀತಿ ಆಚರಿಸಬೇಕೆಂಬ ಬಗ್ಗೆ ಇಲ್ಲಿದೆ ಸಲಹೆ-ಸೂಚನೆ

Pinterest LinkedIn Tumblr

ಮಂಗಳೂರು, ಅಕ್ಟೋಬರ್.25: ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಈ ಬಾರಿಯ ಮೀಲಾದುನ್ನಬಿ ಆಚರಣೆಗೆ ಕೆಲವೊಂದು ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ.

ದ.ಕ.ಜಿಲ್ಲೆಯಲ್ಲಿ ಅ.29ರಂದು ಮೀಲಾದುನ್ನಬಿ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅವರು ಈ ಕೆಳಗಿನ ಮಾರ್ಗಸೂಚಿಯನ್ನು ಪ್ರಕಟಿಸಿದ್ದಾರೆ.

ಮೀಲಾದುನ್ನಬಿ ಸಂದರ್ಭ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ, ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ/ಸಾಂಸ್ಕೃತಿಕ ಕಾರ್ಯಕ್ರಮ ಮಾಡಬಾರದು.

ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ/ಡಿಜಿಟಲ್/ ಸೌಂಡ್ ಸಿಸ್ಟಮ್ ಬಳಸಬಾರದು. ಕಬರ್ ಸ್ಥಾನ ಸಹಿತ ಯಾವುದೇ ರೀತಿಯ ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನಕ್ಕೂ ಅವಕಾಶವಿಲ್ಲ.

ಮಸೀದಿ-ದರ್ಗಾಗಳಲ್ಲಿ ಸುರಕ್ಷಿತ ಅಂತರ ಕಾಪಾಡಬೇಕು. ಮುಖಗವಸುಗಳನ್ನು ಕಡ್ಡಾಯವಾಗಿ ಉಪಯೋಗಿಸಬೇಕು. 60 ವರ್ಷ ಮೇಲ್ಪಟ್ಟ ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಮೀಲಾದುನ್ನಬಿ ಆಚರಿಸಬೇಕು.

ಸ್ಯಾನಿಟೈಸರ್ ಹಾಗೂ ಸೋಪಿನೊಂದಿಗೆ ಕೈ ತೊಳೆಯಲು ಪ್ರವೇಶದ್ವಾರದಲ್ಲಿ ಸೂಕ್ತ ವ್ಯವಸ್ಥೆ ಮಾಡಬೇಕು. ವೈಯಕ್ತಿಕವಾಗಿ 6 ಅಡಿ ಸುರಕ್ಷಿತ ಅಂತರವನ್ನು ಕಡ್ಡಾಯವಾಗಿ ಕಾಪಾಡಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Comments are closed.