ಕರಾವಳಿ

ಉಡುಪಿಯಲ್ಲಿ ನಿಗೂಢವಾಗಿ ಮೃತಪಟ್ಟ ಯುವತಿ: ಜೊತೆಗಿದ್ದ ಯುವಕ ಈಗ ನಾಪತ್ತೆ..!

Pinterest LinkedIn Tumblr

ಉಡುಪಿ: ಲಿವಿಂಗ್ ಇನ್ ರಿಲೇಶನ್ ಶಿಪ್ ವ್ಯವಸ್ಥೆಯಲ್ಲಿದ್ದ ಯುವತಿ ತೀವೃ ಅಸ್ವಸ್ಥಳಾಗಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ ಯುವಕ ನಾಪತ್ತೆಯಾಗಿದ್ದಾನೆ. ಚಿಕಿತ್ಸೆ ಫಲಕಾರಿಯಾಗದೆ ಯುವತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು ಉಡುಪಿಯಲ್ಲಿ ಈ ಘಟನೆ ನಡೆದಿದೆ‌.

ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಆಸ್ಪತ್ರೆಗೆ ಬಿಟ್ಟು ನಾಪತ್ತೆಯಾದ ಯುವಕ ಕುಂದಾಪುರ ಮೂಲದವನು ಎನ್ನಲಾಗುತ್ತಿರುವ ಪ್ರಶಾಂತ್ ಎಂದು ಹೇಳಲಾಗುತ್ತಿದೆ‌

ಆಸ್ಪತ್ರೆಗೆ ದಾಖಲಾದ ಕೆಲವೇ ಹೊತ್ತಿನಲ್ಲಿ ಯುವತಿ ಮೃತಪಟ್ಟಿದ್ದಾಳೆ. ಆಕೆ ಉಡುಪಿ ಮೂಲದವಳಾಗಿದ್ದು ಶನಿವಾರ 6:30 ಹೊತ್ತಿಗೆ ರಿಕ್ಷಾದಲ್ಲಿ ಯುವತಿಯನ್ನು ಕರೆದು ತಂದಿದ್ದ ಯುವಕ ಆಕೆ ಮನೆಯವರಿಗೆ ಕರೆಮಾಡಿ ವಿಷಯ ತಿಳಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ.

ಕೆಲಸ ಮತ್ತು ಶಿಕ್ಷಣದ ಉದ್ದೇಶಕ್ಕಾಗಿ ಉಡುಪಿ ನಗರದ ಅಂಬಾಗಿಲಿನಲ್ಲಿ ವಾಸ್ತವ್ಯವಿದ್ದಳು. ಹದಿನೈದು ದಿನಕ್ಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದು ಸಾಮಾಜಿಕ ಜಾಲತಾಣದ ಮೂಲಕ ಪ್ರಶಾಂತನ ಜತೆ ಸ್ನೇಹ ಬೆಳೆಸಿಕೊಂಡಿದ್ದಳು. ಇದೀಗ ಅನುಮಾನಾಸ್ಪದವಾಗಿ ಮೃತ ಪಟ್ಟ ಯುವತಿಯದ್ದು ಕೊಲೆಯೆ ಎಂಬ ಅನುಮಾನ ಕಾಡುತ್ತಿದ್ದು,ಪ್ರಶಾಂತ್ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಸದ್ಯ ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಯಲ್ಲಿ ಇರಿಸಲಾಗಿದೆ.

ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Comments are closed.