ಕರಾವಳಿ

ಮಂಗಳೂರು ದಸರಾ ಶೋಭಾಯಾತ್ರೆ ಬದಲಿಗೆ ಶ್ರೀ ನಾರಾಯಣ ಗುರುಗಳ ಭಾವಚಿತ್ರ ಟ್ಯಾಬ್ಲೋ ನಗರ ಪ್ರದಕ್ಷಿಣೆ

Pinterest LinkedIn Tumblr

ಮಂಗಳೂರು, ಆಕ್ಟೋಬರ್.26: ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ನಡೆಯುತ್ತಿರುವ ವೈಭವದ “ಮಂಗಳೂರು ದಸರಾ ಮಹೋತ್ಸವ” ಇಂದು ಸಂಜೆ ಸಂಪನ್ನಗೊಳ್ಳಲ್ಲಿದ್ದು, ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಈ ಬಾರಿ “ಮಂಗಳೂರು ದಸರಾ’ ಶೋಭಾಯಾತ್ರೆಗೆ ಅವಕಾಶ ಕಲ್ಪಿಸದೆ ಇರುವುದರಿಂದ ಈ ಬಾರಿ ನವದುರ್ಗೆಯರ ಸಹಿತ ಶಾರದಾ ಮಾತೆಯ ಶೋಭಾಯಾತ್ರೆ ಶ್ರೀ ಕ್ಷೇತ್ರದ ಪ್ರಾಂಗಾಣದಲ್ಲಿ ನಡೆಯಲ್ಲಿದ್ದು, ಬಳಿಕ ಶ್ರೀ ಕ್ಷೇತ್ರದ ಪುಷ್ಕರಣಿಯಲ್ಲಿ ಶಾರದಾ ಮಾತೆ ಹಾಗೂ ನವದುರ್ಗೆಯರ ಮೂರ್ತಿಯನ್ನು ವಿಸರ್ಜಿಸಲಾಗುವುದು.

ಆದರೆ “ಮಂಗಳೂರು ದಸರಾ ಮಹೋತ್ಸವ” ಅಂಗವಾಗಿ ಸಾಂಕೇತಿಕವಾಗಿ ಕುದ್ರೋಳಿ ಕ್ಷೇತ್ರದಿಂದ ನಾರಾಯಣ ಗುರುಗಳ ಭಾವಚಿತ್ರ ಟ್ಯಾಬ್ಲೋ ನಗರ ಪ್ರದಕ್ಷಿಣೆ ಹೊರಟ್ಟಿದ್ದು, ಈ ಬಾರಿಯ ದಸರಾ ಮಹೋತ್ಸವದಲ್ಲಿ ನೂತನ ರೀತಿಯ ಸಾಂಪ್ರದಾಯವೊಂದನ್ನು ಹಮ್ಮಿಕೊಳ್ಳಲಾಯಿತು.

ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಪ್ರಮುಖ ಧ್ವಾರದ ಬಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಹಾಗೂ ಶ್ರೀ ಕ್ಷೇತ್ರದಕೋಶಾಧಿಕಾರಿ ಪದ್ಮರಾಜ್ ಆರ್ (ಆಡ್ವಕೇಟ್) ಇವರು ನಾರಾಯಣ ಗುರುಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶ್ರೀ ನಾರಾಯಣ ಗುರುಗಳ ಭಾವಚಿತ್ರ ಟ್ಯಾಬ್ಲೋ ನಗರ ಪ್ರದಕ್ಷಿಣೆಗೆ ಚಾಲನೆ ನೀಡಿದರು.

ಶ್ರೀ ಗೋಕರ್ಣನಾಥ ಕ್ಷೇತ್ರದ ಟ್ರಸ್ಟಿಗಳಾದ ಶೇಖರ್ ಪೂಜಾರಿ, ಕೆ. ಮಹೇಶ್ಚಂದ್ರ, ಕ್ಷೇತ್ರದ ಅಭಿವೃದ್ಧಿ ಸಮಿತಿ ಸದಸ್ಯರಾದ ದೇವೇಂದ್ರ ಪೂಜಾರಿ, ಡಾ. ಬಿ.ಜಿ. ಸುವರ್ಣ, ರಾಜೇಂದ್ರ ಆದರ್ಶ ನಗರ ಹಾಗೂ ಮತ್ತಿತರ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Comments are closed.