ಬೆಂಗಳೂರು: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು ಇಬ್ಬರು ಬುಕ್ಕಿಗಳನ್ನು ಬಂಧಿಸಿದ್ದಾರೆ. ಹೊಯ್ಸಳ ಗೌಡ (48), ನರಸಿಂಹ ಮೂರ್ತಿ (38) ಬಂಧಿತ ಆರೋಪಿಗಳು. ಬಂಧಿತರಿಂದ 13.5 ಲಕ್ಷ ನಗದು ಹಾಗೂ 2 ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ವೈಯಾಲಿಕಾವಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.