ಕರಾವಳಿ

ನ. 1ರಂದು ಕನ್ನಡ ರಾಜ್ಯೋತ್ಸವ : ಈ ಬಾರಿ ದ.ಕ.ಜಿಲ್ಲೆಯಲ್ಲಿ ಆಚರಣೆ ಹೇಗೆ? ಇಲ್ಲಿದೆ ಮಾಹಿತಿ

Pinterest LinkedIn Tumblr

ಮಂಗಳೂರು ಅಕ್ಟೋಬರ್ 30 : ದ.ಕ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವು ನವೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಯಲಿದೆ.

ಧ್ವಜಾರೋಹಣ ಮತ್ತು ಕನ್ನಡ ರಾಜ್ಯೋತ್ಸವದ ಸಂದೇಶವನ್ನು ಮುಜರಾಯಿ ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪ್‍ಚಂದ್ರ ಶೆಟ್ಟಿ, ದ.ಕ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಸುಳ್ಯ ವಿಧಾನಸಭಾ ಕ್ಷೇತ್ರ ಶಾಸಕ ಅಂಗಾರ ಎಸ್., ಮಂಗಳೂರು ವಿಧಾನಸಭಾ ಕ್ಷೇತ್ರ ಶಾಸಕ ಯು.ಟಿ. ಖಾದರ್, ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಶಾಸಕ ಡಾ. ಭರತ್ ಶೆಟ್ಟಿ ವೈ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಶಾಸಕ ಹರೀಶ್ ಪೂಂಜ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಯು, ಪುತ್ತೂರು ವಿಧಾನ ಸಭಾ ಕ್ಷೇತ್ರ ಶಾಸಕ ಸಂಜೀವ ಮಠಂದೂರು, ಮೂಡುಬಿದ್ರೆ ವಿಧಾನಸಭಾ ಕ್ಷೇತ್ರ ಶಾಸಕ ಉಮಾನಾಥ್ ಎ ಕೋಟ್ಯಾನ್, ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್, ಕರ್ನಾಟಕ ವಿಧಾನ ಪರಿಷತ್ ಶಾಸಕ ಬಿ.ಎಂ.ಫಾರೂಕ್, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಆಯನೂರು ಮಂಜುನಾಥ್, ಎಸ್. ಎಲ್ ಭೋಜೇಗೌಡ ಪ್ರತಾಪ್ ಸಿಂಹ ನಾಯಕ್ ಕೆ., ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಹಾಗೂ ಮಂಗಳೂರು ಮಹಾನಗರಪಾಲಿಕೆ ಮಹಾಪೌರರಾದ ದಿವಾಕರ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.

ನೆಹರೂ ಮೈದಾನದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ವಿವರ ಇಂತಿವೆ:

ಬೆಳಿಗ್ಗೆ 8.50 ಕ್ಕೆ ನೆಹರೂ ಮೈದಾನದಲ್ಲಿ ಶಾಲಾ ಮಕ್ಕಳಿಂದ ಕನ್ನಡ ನಾಡಗೀತೆ, 9 ಕ್ಕೆ ಜಿಲ್ಲಾ ಉಸ್ತವಾರಿ ಸಚಿವರಿಂದ ಧ್ವಜರೋಹಣ, ರಾಷ್ಟ್ರಗೀತೆ (ಪೊಲೀಸ್ ಬ್ಯಾಂಡ್‍ನಲ್ಲಿ), 9.05 ಕ್ಕೆ ಪರೇಡ್ ವೀಕ್ಷಣೆ, ನಾಡಗೀತೆ, ರೈತಗೀತೆ ಹಾಡಲಿದ್ದಾರೆ.

9.15 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಜ್ಯೋತ್ಸವ ಸಂದೇಶ, 9.30 ಕ್ಕೆ ಪಥಸಂಚಲನ ಪರೇಡ್ ವಿಸರ್ಜನೆ, 9.35 ಕ್ಕೆ ಜಿಲ್ಲಾ ಪ್ರಶಸ್ತಿ ವಿತರಣೆ, 10 ಗಂಟೆಗೆ ವಂದನಾರ್ಪಣೆ ನಡೆಯಲಿದೆ.

ಸಮಾರಂಭಕ್ಕೆ ಹಾಜರಾಗುವವವರು ಕಡ್ಡಾಯವಾಗಿ ಮುಖಗವಸು ಧರಿಸಬೇಕು ಹಾಗೂ ಸಮಾಜಿಕ ಅಂತರವನ್ನು ಪಾಲಿಸಬೇಕು.

Comments are closed.