ಕರಾವಳಿ

ಮಂಗಳೂರು: ಪತ್ರಕರ್ತರ 35ನೇ ರಾಜ್ಯ ಸಮ್ಮೇಳನದ ನೆನಪಿನ ಸಂಚಿಕೆ ಬಿಡುಗಡೆ

Pinterest LinkedIn Tumblr

ಮಂಗಳೂರು, ಅಕ್ಟೋಬರ್ 30: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘವು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕಳೆದ ಮಾ.7-8 ರಂದು ಮಂಗಳೂರಿನಲ್ಲಿ ಆಯೋಜಿಸಿದ ಪತ್ರಕರ್ತರ 35ನೇ ರಾಜ್ಯ ಸಮ್ಮೇಳನದ ನೆನಪಿನ ಸಂಚಿಕೆಯನ್ನು ಗುರುವಾರ ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆ ಮಾಡಲಾಯಿತು.

ರೆಡ್‌ಕ್ರಾಸ್ ಸಂಸ್ಥೆಯ ಮಂಗಳೂರು ಶಾಖೆಯ ಗೌರವ ಕಾರ್ಯದರ್ಶಿ ಹಾಗೂ ನಿವೃತ್ತ ಅಪರ ಜಿಲ್ಲಾಧಿಕಾರಿ ಕೆ.ಎ. ಪ್ರಭಾಕರ ಶರ್ಮ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ನೆನಪಿನ ಸಂಚಿಕೆ(ಕರ್ನಾಟಕ ಪತ್ರಕರ್ತ)ಯನ್ನು ಬಿಡುಗಡೆ ಮಾಡಿ ಪತ್ರಕರ್ತರ ಸಂಘಕ್ಕೆ ಶುಭ ಹಾರೈಸಿದರು.

ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳನ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ ಎಂದ ಅವರು ಸ್ಮರಣ ಸಂಚಿಕೆ ಉತ್ತಮವಾಗಿ ಮೂಡಿ ಬಂದಿದ್ದು, ಇದರ ಯಶಸ್ಸಿಗೆ ಶ್ರಮಿಸಿದ ಪದಾಧಿಕಾರಿಗಳಿಗೆ ಅವರು ಕೃತಜ್ಞತೆ ಸಲ್ಲಿಸಿದರು.

ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕೆ.ಆನಂದ ಶೆಟ್ಟಿ, ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ರವಿಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು.

Comments are closed.