ಕರಾವಳಿ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಖಚಿತ : ಮಂಗಳೂರಿನಲ್ಲಿ ಮುಖ್ಯಮಂತ್ರಿ ಬಿಎಸ್‌ವೈ

Pinterest LinkedIn Tumblr

ಮಂಗಳೂರು: ಶಿರಾ ಹಾಗೂ ರಾಜರಾಜೇಶ್ವರಿ ಹಾಗೂ ವಿಧಾನ ಪರಿಷತ್ತಿನ ಉಪ ಚುನಾವಣೆಯಲ್ಲಿ ನಾವು ನೂರಕ್ಕೆ ನೂರು ಗೆಲ್ಲುತ್ತೇವೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ದಯಾನೀಯವಾಗಿ ಸೋಲನುಭವಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಮಂಗಳೂರಿನಲ್ಲಿ ಗುರುವಾರ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಬುಧವಾರ ಯಡಿಯೂರಪ್ಪ ಅವರು ನಗರಕ್ಕೆ ಬಂದಿದ್ದು, ಈ ಸಂದರ್ಭ ಅದಾನಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರು ಸುದ್ದಿಗಾರರ ಜೊತೆ ಮಾತನಾಡಿದರು.

ಮುಖ್ಯಮಂತ್ರಿ ಬದಲಾವಣೆ ಕುರಿತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು.

ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಚುನಾವಣೆ ನಡೆದಿದೆ. ಅಲ್ಲಿ ಕಾಂಗ್ರೆಸ್ ಸೋಲುವುದು ಖಂಡಿತ, ಆಗ ವಿಪಕ್ಷ ನಾಯಕ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ಆಗುತ್ತೆ ಅಂತ ನಮಗೂ ದೆಹಲಿಯಿಂದ ಮಾಹಿತಿ ಬಂದಿದೆ. ಆದರೆ ಈ ಬಗ್ಗೆ ನಾನು ಹಗುರವಾದ ಹೇಳಿಕೆ ನೀಡುವುದಿಲ್ಲ. ಬದಲಾಗಿ ಸಿದ್ದರಾಮಯ್ಯ ಜವಾಬ್ದಾರಿಯುತವಾಗಿ ಮಾತಾಡುವಂತೆ ವಿನಂತಿ ಮಾತಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಇಂದು ಬಿಜೆಪಿ ಕಾರ್ಯಕಾರಣಿ ನಡೆಯಲಿದ್ದು, ಇದರಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಬುಧವಾರ ರಾತ್ರಿ 8 ಗಂಟೆಯ ಸುಮಾರಿಗೆ ಮಂಗಳೂರಿಗೆ ಆಗಮಿಸಿದ್ದಾರೆ.

Comments are closed.