ಕರಾವಳಿ

ಮಂಗಳೂರು: ಮುಖ್ಯಮಂತ್ರಿಗಳಿಂದ “ಸೇವಾಂಜಲಿ ಆರೋಗ್ಯ ಕಾರ್ಡ್” ಬಿಡುಗಡೆ

Pinterest LinkedIn Tumblr

ಮಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಕೋರ್‌ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲ್ಲು ಮಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸೇವಾಂಜಲಿ ಚಾರಿಟಬಲ್ ಟ್ರಸ್ಟ್‌ನ ನೂತನ ಸೇವಾಂಜಲಿ ಆರೋಗ್ಯ ಕಾರ್ಡ್ ಅನ್ನು ಗುರುವಾರ ನಗರದ ಒಷಿಯನ್ ಪರ್ಲ್ ಹೋಟಲ್‌ನಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಅವರಿಗೆ ಸೇವಾಂಜಲಿ ಚಾರಿಟಬಲ್ ಟ್ರಸ್ಟ್ ಮಾಡುತ್ತಿರುವ ಜನಪರ ಸೇವಾಕಾರ್ಯಗಳನ್ನು ಮಂಗಳೂರು ನಗರ ದಕ್ಷಿಣ ಶಾಸಕ, ಟ್ರಸ್ಟ್ ಅಧ್ಯಕ್ಷ ವೇದವ್ಯಾಸ ಕಾಮತ್ ವಿವರಿಸಿದರು.

ಸೇವಾಂಜಲಿ ಟ್ರಸ್ಟ್ ಕಾರ್ಯಗಳು ಹೀಗೆ ನಿರಂತರವಾಗಿ ನಡೆದು ಸಮಾಜದ ದುರ್ಬಲ, ಅಶಕ್ತರಿಗೆ ಸಹಾಯವಾಗಲಿ, ಈ ಟ್ರಸ್ಟ್ ನಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಪ್ರಮುಖರಿಗೆ, ಕಾರ್ಯಕರ್ತರಿಗೆ ಶುಭವಾಗಲಿ ಎಂದು ಸಿಎಂ ಯಡಿಯೂರಪ್ಪ ಆರೋಗ್ಯ ಕಾರ್ಡ್ ಹಾರೈಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಮಂಗಳೂರು ಮೇಯರ್ ದಿವಾಕರ ಪಾಂಡೇಶ್ವರ್, ರಾಜ್ಯ ಕೈಗಾರಿಕಾ ಪ್ರಕೋಷ್ಟದ ಸಂಚಾಲಕ ಪ್ರದೀಪ್ ಪೈ, ಶಾಸಕರಾದ ಉಮಾನಾಥ ಕೋಟ್ಯಾನ್, ಟ್ರಸ್ಟ್ ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈ, ಚೇತನ್ ಕಾಮತ್ ಸಹಿತ ಹಲವರು ಉಪಸ್ಥಿತರಿದ್ದರು.

Comments are closed.