
ಮಂಗಳೂರು ನವೆಂಬರ್.06 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಂಡಿರುವ ರಸ್ತೆ, ಸೇತುವೆ ಹಾಗೂ ಕಟ್ಟಡಗಳ ದುರಸ್ಥಿಗೆ ಅನುದಾನ ಕೋರಿ ಮುಖ್ಯಮಂತ್ರಿ ಹಾಗೂ ಡಿಸಿಎಂಗೆ ಮನವಿ ಸಲ್ಲಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಸುರಿದ ಭಾರಿ ಮಳೆಯಿಂದ ಲೋಕೋಪಯೋಗಿ ಇಲಾಖೆಯ ರಸ್ತೆ, ಸೇತುವೆ ಹಾಗೂ ಕಟ್ಟಡಗಳು ಹಾನಿಗೊಂಡಿದ್ದು, ಅದನ್ನು ಪುನಃ ಸ್ಥಾಪಿಸಲು ಹೆಚ್ಚಿನ ಅನುದಾನ ನೀಡುವಂತೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ರಸ್ತೆಗಳನ್ನು ಜಿಲ್ಲಾ ಮುಖ್ಯ ರಸ್ತೆಯನ್ನಾಗಿ ಮತ್ತು ಜಿಲ್ಲಾ ಮುಖ್ಯ ರಸ್ತೆಯನ್ನು ರಾಜ್ಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ವಿಶೇಷ ಅನುದಾನ ಒದಗಿಸಲು ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಇವರಿಗೆ ಮೀನುಗಾರಿಕೆ ಬಂದರು ಒಳನಾಡು ಜಲಸಾರಿಗೆ ಮುಜರಾಯಿ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು, ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ನವೆಂಬರ್ 5 ರಂದು ಮನವಿ ಪತ್ರ ನೀಡಿರುತ್ತಾರೆ.
ಹೆದ್ದಾರಿಗಳ ಅಭಿವೃದ್ಧಿಗೆ ವಿಶೇಷ ಅನುದಾನ ಕೋರಿ ಮನವಿ :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಸುರಿದ ಭಾರಿ ಮಳೆಯಿಂದ ಲೋಕೋಪಯೋಗಿ ಇಲಾಖೆಯ ರಸ್ತೆ, ಸೇತುವೆ ಹಾಗೂ ಕಟ್ಟಡಗಳು ಹಾನಿಗೊಂಡಿದ್ದು, ಅದನ್ನು ಪುನಃ ಸ್ಥಾಪಿಸಲು ಹೆಚ್ಚಿನ ಅನುದಾನ ನೀಡುವಂತೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ರಸ್ತೆಗಳನ್ನು ಜಿಲ್ಲಾ ಮುಖ್ಯ ರಸ್ತೆಯನ್ನಾಗಿ ಮತ್ತು ಜಿಲ್ಲಾ ಮುಖ್ಯ ರಸ್ತೆಯನ್ನು ರಾಜ್ಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಿರುವುದರಿಂದ ಅವುಗಳನ್ನು ಅಭಿವೃದ್ಧಿಪಡಿಸಲು ವಿಶೇಷ ಅನುದಾನ ಕೋರಿ ಲೋಕೋಪಯೋಗಿ ಇಲಾಖೆ ಸಚಿವರಾದ ಗೋವಿಂದ ಕಾರಜೋಳ ಅವರಿಗೆ ದ,ಕ ಜಿಲ್ಲೆಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಹಾಗೂ ಎಲ್ಲಾ ಶಾಸಕರ ಪರವಾಗಿ ಗುರುವಾರ ಮನವಿ ಪತ್ರ ಸಲ್ಲಿಸಿರುತ್ತಾರೆ.
Comments are closed.