ಕರಾವಳಿ

ಕುಂದಾಪುರದಲ್ಲಿ ಅಧಿಕಾರಿಗಳ ಕಾರ್ಯಾಚರಣೆ:  ಭಿಕ್ಷಾಟನೆ ನಿರತ 11 ಮಕ್ಕಳ ರಕ್ಷಣೆ

Pinterest LinkedIn Tumblr

ಕುಂದಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ಘಟಕ,  ಕುಂದಾಪುರ ಪುರಸಭೆ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಮಕ್ಕಳ ಸಹಾಯವಾಣಿ, ವಿಶ್ವಾಸದಮನೆ ಸಂಸ್ಧೆ ಜಂಟಿ ಕಾರ್ಯಾಚರಣೆ ನಡೆಸಿ ಭಿಕ್ಷಾಟನ ನಿರತ ಮಕ್ಕಳನ್ನು ರಕ್ಷಿಸಿದ್ದಾರೆ.

ಶನಿವಾರದಂದು ಕುಂದಾಪುರದ ಸಂತೆ ಮಾರ್ಕೆಟ್ ಹಾಗೂ ಬಸ್ ನಿಲ್ದಾಣಗಳಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಶಿರಸಿ ಮತ್ತು ಹಾವೇರಿ ಮೂಲದ 9 ಹೆಣ್ಣು  ಇಬ್ಬರು ಗಂಡು ಮಕ್ಕಳು ಸೇರಿ ಒಟ್ಟು 11 ಮಕ್ಕಳನ್ನು ರಕ್ಷಿಸಿ ಪುನರ್ವಸತಿ ಕಲ್ಪಿಸುವ ಸಲುವಾಗಿ ಮಕ್ಕಳ ಕಲ್ಯಾಣ ಸಮಿತಿ ನಿಟ್ಟೂರು ಇಲ್ಲಿನವರ ವಶಕ್ಕೆ ನೀಡಲಾಗಿದೆ.

ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸದಾನಂದ ನಾಯಕ್, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಎನ್. ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿ ಶೋಭಾ ಶೆಟ್ಟಿ, ಕುಂದಾಪುರ ಪುರಸಭೆಯ ಪರಿಸರ ಅಭಿಯಂತರ ರಾಘವೇಂದ್ರ, ಪುರಸಭೆ ಅಧಿಕಾರಿಗಳಾದ ಶರತ್, ರಾಘವೇಂದ್ರ ನಾಯ್ಕ್ , ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಅರುಣ್ ಕುಮಾರ್ .ಬಿ .ಎನ್, ದೇವಾ ಕುಮಾರಿ,  ಸುನಿತಾ ಬಾನು, ಶಂಕರ್ ಶೆಟ್ಟಿ, ಕುಂದಾಪುರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸದಾಶಿವ ಗವರೋಜಿ, ಸಿಬ್ಬಂದಿ ಪ್ರಸನ್ನ, ಬೇಬಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೇಕರ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಹೇಶ್ ದೇವಾಡಿಗ, ಯೋಗೀಶ್, ಸುರಕ್ಷಾ, ಸುನಂದಾ, ಸಂದೇಶ, ಅಂಬಿಕಾ, ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕಿ ಪೂರ್ಣಿಮಾ ಬಾನು, ಮಕ್ಕಳ ಸಹಾಯವಾಣಿಯ ವೃಷಕ್ ಪ್ರಮೋದ್, ವಿಶ್ವಾಸದಮನೆ ಸಂಸ್ಥೆಯ ಕ್ರಿಸ್ಟೋಪರ್ ಭಾಗವಹಿಸಿದ್ದರು.

(ವರದಿ- ಯೋಗೀಶ್ ಕುಂಭಾಸಿ)

Comments are closed.