ಕರಾವಳಿ

ನಾಳೆ ಮಂಗಳೂರಿನಲ್ಲಿ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಧಾನ: ಸಚಿವ ಸಿ.ಟಿ.ರವಿಯವರಿಂದ ಉದ್ಘಾಟನೆ

Pinterest LinkedIn Tumblr

ಮಂಗಳೂರು, ನವೆಂಬರ್.07:  ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇವರು ನೀಡುವ 2019ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಯಕ್ಷಸಿರಿ ವಾರ್ಷಿಕ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರಧಾನ ಸಮಾರಂಭ ನವಂಬರ್ 8ರಂದು ಸಂಜೆ 3ಕ್ಕೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕಲಾಭವನ ಮಂಗಳೂರು ಇಲ್ಲಿ ಜರಗಲಿದೆ.

ಉದ್ಘಾಟನೆ ಮತ್ತು ಗೌರವ ಪ್ರಶಸ್ತಿ ಪ್ರಧಾನವನ್ನು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಸಿ.ಟಿ.ರವಿ ನೆರವೇರಿಸಲಿದ್ದಾರೆ.

ಯಕ್ಷಸಿರಿ ವಾರ್ಷಿಕ ಪ್ರಶಸ್ತಿಯನ್ನು ಮುಜರಾಯಿ ಮತ್ತು ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಧಾನಿಸಲಿದ್ದಾರೆ.

ಮಂಗಳೂರು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಪುಸ್ತಕ ಬಹುಮಾನ ಪ್ರಶಸ್ತಿಯನ್ನು ನೀಡಲಿದ್ದಾರೆ.

ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ.ಯಂ.ಎ.ಹೆಗಡೆ ಪ್ರಸ್ತಾವನೆಗೈಯಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ದಿವಾಕರ್ ಪಾಂಡೇಶ್ವರ್, ಕರ್ನಾಟಕ ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ ಭಾಗವಹಿಸಲಿದ್ದಾರೆ.

2019ನೇ ಸಾಲಿನ ಗೌರವ ಪ್ರಶಸ್ತಿಯನ್ನು ಡಾ.ಚಂದ್ರಶೇಖರ ದಾಮ್ಗೆ ಅವರಿಗೆ ಪ್ರಧಾನಿಸಲಾಗುವುದು.
ಯಕ್ಷಸಿರಿ ಪ್ರಶಸ್ತಿಯನ್ನು ಉಬರಡ್ಕ ಉಮೇಶ್ ಶೆಟ್ಟಿ ಮತ್ತು ಭಾಗವತ ಕುರಿಯ ಗಣಪತಿ ಶಾಸ್ತ್ರಿಯವರಿಗೂ, ಪುಸ್ತಕ ಬಹುಮಾನ ಪ್ರಶಸ್ತಿಯನ್ನು ಶ್ರೀ ಹೊಸ್ತೋಟ ಮಂಜುನಾಥ ಭಾಗವತ(ಒಡಿಯೂರು ಶ್ರೀ ಗುರುದೇವ ಪ್ರಕಾಶನದ ಮೂಲಕ ಪ್ರಕಾಶಿಸಲ್ಪಟ್ಟ ‘ವೀರಾಂಜನೆಯ ವೈಭವ’ ಪ್ರಸಂಗ ಸಂಪುಟ) ಮತ್ತು ಕೃಷ್ಣ ಪ್ರಕಾಶ ಉಳಿತ್ತಾಯ(ಅಗರಿ ಮಾರ್ಗ ಕೃತಿಗಾರ) ಅವರಿಗೂ ನೀಡಿ ಗೌರವಿಸಲಾಗುವುದು.

ಅಕಾಡೆಮಿ ಅಧ್ಯಕ್ಷರು ಹಾಗೂ ಸದಸ್ಯರ ತಾಳಮದ್ದಳೆ :

ಯಕ್ಷಗಾನ ಅಕಾಡೆಮಿ ಹಾಗೂ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರುಗಳು ಹಾಗೂ ಅಕಾಡೆಮಿ ಸದಸ್ಯರುಗಳಾದ ರಾಧಾಕೃಷ್ಣ ಕಲ್ಚಾರ್, ಕದ್ರಿ ನವನೀತ ಶೆಟ್ಟಿ, ದಾಮೋದರ ಶೆಟ್ಟಿ, ಕುಳಾಯಿ ಮಾಧವ ಭಂಡಾರಿ ಹಾಗೂ ದಿನೇಶ್ ರೈ ಕಡಬ ಅವರ ಅರ್ಥಗಾರಿಕೆಯಲ್ಲಿ ‘ಜಾಂಬವತಿ ಕಲ್ಯಾಣ’ ಕನ್ನಡ-ತುಳು ಯಕ್ಷಗಾನ ತಾಳಮದ್ದಳೆಯನ್ನು ಸಭಾ ಕಾರ್ಯಕ್ರಮದ ಬಳಿಕ ನಡೆಸಲಾಗುವುದು.

ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ, ಪದ್ಮನಾಭ ಉಪಾಧ್ಯ, ಕೃಷ್ಣಪ್ರಕಾಶ ಉಳಿತ್ತಾಯ, ಪೂರ್ಣೇಶ್ ಆಚಾರ್ಯ ಅವರು ಹಿಮ್ಮೇಳದಲ್ಲಿ ಪಾಲ್ಗೊಳ್ಳಲಿರುವರು.

Comments are closed.