ಕರಾವಳಿ

ಸುಲ್ತಾನ್ ಬತ್ತೇರಿ ರಸ್ತೆ ಅಗಲೀಕರಣಕ್ಕೆ ಸ್ಥಳೀಯರ ಸಹಕಾರ ಕೋರಿದ ಶಾಸಕ ಕಾಮಾತ್

Pinterest LinkedIn Tumblr

ಮಂಗಳೂರು, ನವೆಂಬರ್.07: ಉರ್ವ – ಸುಲ್ತಾನ್ ಬತ್ತೇರಿ ರಸ್ತೆ ಅಗಲೀಕರಣ ಸಂಬಂಧಿಸಿದಂತೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಸಾರ್ವಜನಿಕರೊಂದಿಗೆ ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಶಾಸಕ ಕಾಮತ್, ಸುಲ್ತಾನ್ ಬತ್ತೇರಿ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಕಾರ್ಯದಲ್ಲಿ ಸಾರ್ವಜನಿಕರ, ಸ್ಥಳೀಯರ ಬೆಂಬಲ ಅತೀ ಅಗತ್ಯ.

ಸುಲ್ತಾನ್ ಬತ್ತೇರಿ ಪ್ರದೇಶದ ಅಭಿವೃದ್ಧಿ ಹಾಗೂ ಅಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಉತ್ತಮ ರಸ್ತೆಯ ಅಗತ್ಯವಿದೆ. ಮಂಗಳೂರಿನಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನು ನಿಯಂತ್ರಣ ಸಾಧಿಸಲು ರಸ್ತೆ ಅಗಲೀಕರಣ ಅವಶ್ಯಕವಾಗಿದೆ. ಇದಕ್ಕೆ ಸ್ಥಳೀಯರು ಸಹಕರಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಬೋಳೂರು, ಬಿಜೆಪಿ ಮುಖಂಡರಾದ ರಾಹುಲ್ ಶೆಟ್ಟಿ,ಬಿಲ್ಲವ ಸಂಘ ಉರ್ವ ಇದರ ಅದ್ಯಕ್ಷರಾದ ದಿವಾಕರ್, ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Comments are closed.