ಕರ್ನಾಟಕ

ಉಪಚುನಾವಣೆ: ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಬರ್ಜರಿ ಮುನ್ನಡೆ

Pinterest LinkedIn Tumblr

ಬೆಂಗಳೂರು : ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಬೆಳಗ್ಗೆ ಆರಂಭಗೊಂಡಿದ್ದು, ಸದ್ಯಕ್ಕೆ ಎರಡೂ ಕ್ಷೇತ್ರದಲ್ಲಿಯೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ.

ತೀವ್ರ ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಐದನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡ ಬಳಿಕ 14,843 ಮತಗಳ ಮುನ್ನಡೆಯನ್ನು ಕಾಯ್ದುಕೊಂಡಿದ್ದರು. ಈ ವೇಳೆ ಮುನಿರತ್ನ ಒಟ್ಟು 22,845 ಮತಗಳನ್ನು ಪಡೆದುಕೊಂಡಿದ್ದರು. ಕಾಂಗ್ರೆಸ್ ಅಭ್ಯರ್ಥಿ ಕುಸುಮ 11,121 ಮತಗಳನ್ನು ಪಡೆಯುವಲ್ಲಿ ಮಾತ್ರ ಯಶಸ್ವಿಯಾಗಿದ್ದರು.ಇನ್ನೂ ಜೆಡಿಎಸ್ ಅಭ್ಯರ್ಥಿ 728 ಮತಗಳನ್ನು ಪಡೆದಿದ್ದರು.

ಬಳಿಕ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು 7 ನೇ ಸುತ್ತಿನ ಮತ ಎಣಿಕೆಯಲ್ಲೂ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. 7 ನೇ ಸುತ್ತಿನ ಮತ ಎಣಿಕೆ ಮುಕ್ತಾಯ ಗೊಂಡಿದ್ದು, 19532 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಒಟ್ಟು 16 ಅಭ್ಯರ್ಥಿಗಳು ಕಣದಲ್ಲಿ ನಿಂತಿದ್ದು, ಪ್ರಮುಖವಾಗಿ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಮತ್ತು ಜೆಡಿಎಸ್ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ಕಣದಲ್ಲಿದ್ದಾರೆ.

ಅಭ್ಯರ್ಥಿಗಳಿಗೆ ಮಾತ್ರವಲ್ಲದೇ, ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಹೆಚ್.ಡಿ.ಕುಮಾರಸ್ವಾಮಿ ಅವರಿಗೂ ಪ್ರತಿಷ್ಠೆಯಾಗಿದೆ.

ಮತಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ. ಶಿರಾ ಕ್ಷೇತ್ರದಲ್ಲಿ ಕೇಂದ್ರ ಶಸ್ತ್ರಾಸ್ತ್ರ ಪಡೆ, ಕೆಎಸ್‌ಆರ್’ಪಿ ತುಕಡಿ ಮತ್ತು ಹಿರಿಯ ಅಧಿಕಾರಿಗಳನ್ನೊಳಗೊಂಡಂತೆ 200ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮೂವರು ಡಿಸಿಪಿ, 8 ಎಸಿಪಿ, 41 ಇನ್ಸ್’ಪೆಕ್ಟರ್, 105 ಪಿಎಸ್‌ಐ, 179 ಎಎಸ್‌ಐ, 183 ಗೃಹ ರಕ್ಷಕ ಸಿಬ್ಬಂದಿ ಸೇರಿದಂತೆ 1670 ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.

Comments are closed.