ಪ್ರಮುಖ ವರದಿಗಳು

ಚುನಾವಣೆ: ದೇಶದ ವಿವಿದೆಡೆಗಳಲ್ಲಿ ಬಿಜೆಪಿಗೆ ಭಾರೀ ಮುನ್ನಡೆ – ಗುಜರಾತ್​ನ 8 ಕ್ಷೇತ್ರಗಳಲ್ಲಿ7 ಮುನ್ನಡೆ

Pinterest LinkedIn Tumblr

ಗಾಂಧಿನಗರ : ಬಿಹಾರದ ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ಜೊತೆ ಮಧ್ಯಪ್ರದೇಶ, ಕರ್ನಾಟಕ, ಒಡಿಶಾ, ಉತ್ತರಪ್ರದೇಶ ಸೇರಿದಂತೆ ದೇಶದ 10ಕ್ಕೂ ಹೆಚ್ಚು ರಾಜ್ಯಗಳ 56 ವಿಧಾನಸಭಾ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿದ್ದು, ಹೆಚ್ಚಿನ ಎಲ್ಲಾ ಕಡೆಗಳಲ್ಲೂ ಬಿಜೆಪಿ ಮುನ್ನಡೆ ಕಾಯ್ದುಕೊಂಡು ಬಂದಿದೆ.

ಮಧ್ಯಪ್ರದೇಶದ 28 ಕ್ಷೇತ್ರಗಳು, ಕರ್ನಾಟಕದ 2 ಕ್ಷೇತ್ರಗಳು ಸೇರಿದಂತೆ ದೇಶಾದ್ಯಂತ 59 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲುವಂತಿದೆ. ಆರಂಭಿಕ ಹಂತಗಳ ಮತ ಎಣಿಕೆಯಲ್ಲಿ ಬಿಜೆಪಿ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಮಧ್ಯ ಪ್ರದೇಶದಲ್ಲಿ ತೆರವಾಗಿರುವ 28 ಕ್ಷೇತ್ರಗಳಲ್ಲಿ ಬಿಜೆಪಿ 18 ಕಡೆ ಮುನ್ನಡೆ ಹೊಂದಿದೆ. ಸರ್ಕಾರವನ್ನು ಉಳಿಸಿಕೊಳ್ಳುವಷ್ಟು ಅವಶ್ಯವಿರುವ ಎಂಟರ ಗಡಿಯನ್ನು ಬಿಜೆಪಿ ಸುಲಭವಾಗಿ ದಾಟುವಂತೆ ಕಾಣುತ್ತಿದೆ. ಕಾಂಗ್ರೆಸ್ ಇಲ್ಲಿ 8 ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿದೆ.

ಕರ್ನಾಟಕದಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಹೊಂದಿದೆ. ಶಿರಾ ಮತ್ತು ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಮುನ್ನಡೆ ಪಡೆದಿದ್ದಾರೆ. ಗುಜರಾತ್​ನ 8 ಕ್ಷೇತ್ರಗಳಲ್ಲಿ ಬಿಜೆಪಿ ಹೆಚ್ಚೂಕಡಿಮೆ ಕ್ಲೀನ್ ಸ್ವೀಪ್ ಮಾಡುತ್ತಿರುವಂತಿದೆ. ಗುಜರಾತ್‌ನ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಏಳು ಕ್ಷೇತ್ರಗಳಲ್ಲಿ ಆಡಳಿತಾರೂಢ ಬಿಜೆಪಿಯ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಒಂದು ಸ್ಥಾನದಲ್ಲಿ ಕಾಂಗ್ರೆಸ್‌ ಮುಂದಿದೆ.

ಗುಜರಾತ್‌ನ ಎಂಟು ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 3 ರಂದು ಮತದಾನ ನಡೆದಿತ್ತು. ಇಂದು ಮುಂಜಾನೆ 8ಗಂಟೆಗೆ ಮತ ಎಣಿಕೆ ಕಾರ್ಯವು ಪ್ರಾರಂಭವಾಗಿದೆ. ಜೂನ್‌ ತಿಂಗಳಲ್ಲಿ ನಡೆದ ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಶಾಸಕರು ರಾಜೀನಾಮೆ ನೀಡಿದ ಕಾರಣ ಇಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಐವರು ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. 2017ರಲ್ಲಿ ನಡೆದ ಚುನಾವಣೆಯಲ್ಲಿ ಈ ಐವರು ಶಾಸಕರು ಗೆದ್ದಿದ್ದ ಕ್ಷೇತ್ರಗಳಲ್ಲೇ ಬಿಜೆಪಿ ಇವರನ್ನು ಮತ್ತೆ ಕಣಕ್ಕಿಳಿಸಿದೆ.

Comments are closed.