ಕರ್ನಾಟಕ

ತೀವ್ರ ಪೈಪೋಟಿ ನಡುವೆಯೇ ಶಿರಾದಲ್ಲಿ ಮೊದಲ ಬಾರಿಗೆ ಖಾತೆ ತೆರೆದ ಬಿಜೆಪಿ

Pinterest LinkedIn Tumblr

ತುಮಕೂರು, ನವೆಂಬರ್.10 : ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಉಪ ಚುನಾವಣೆಯ ಮತ ಏಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರು ಜಯಭೇರಿ ಬಾರಿಸಿದ್ದಾರೆ. ಇದೇ ಮೊದಲ ಬಾರಿಗೆ ಶಿರಾ ಕ್ಷೇತ್ರದಲ್ಲಿ ಖಾತೆ ತೆರೆಯುವ ಮೂಲಕ ಬಿಜೆಪಿ ಇತಿಹಾಸ ನಿರ್ಮಾಣ ಮಾಡಿದೆ.

ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಬಿಜೆಪಿಯ ರಾಜೇಶ್ ಗೌಡ ಹಾಗೂ ಕಾಂಗ್ರೆಸ್ ನ ಟಿಬಿ ಜಯಚಂದ್ರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಇಂತಹ ಪೈಪೋಟಿಯ ನಡುವೆಯೂ 63294 ಮತಗಳನ್ನು ಪಡೆಯುವ ಮೂಲಕ 10,380 ಮತಗಳ ಭರ್ಜರಿ ಅಂತರದಲ್ಲಿ ಜಯ ಸಾಧಿಸಿದ್ದಾರೆ.

ಅಂದಹಾಗೇ ಇದುವರೆಗೆ ನಡೆದಂತ ಹಲವು ಸುತ್ತಿನ ಮತಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ರಾಜೇಶ್ ಗೌಡ 63,294 ಮತ ಗಳಿಸಿದ್ದರೇ, ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ 52,914 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ 29,166 ಮತಗಳನ್ನು ಗಳಿಸಿದ್ದಾರೆ.

ಇವಿಎಂ ಕೌಂಟಿಂಗ್ ಮುಗಿದ ಬಳಿಕ ಬೂತ್‌ಗಳ ವಿವಿಪ್ಯಾಟ್ ಸ್ಲಿಪ್ ಎಣಿಕೆ ನಡೆಯಲಿದೆ. ಬಳಿಕ ಚುನಾವಣಾ ಆಯೋಗ ಅಭ್ಯರ್ಥಿ ಗೆಲುವಿನ ಬಗ್ಗೆ ಅಧಿಕೃತ ಘೋಷಣೆ ಮಾಡಲಿದೆ.

Comments are closed.