ಕರ್ನಾಟಕ

ಜ್ಯೋತಿಷಿಗಳ ಮಾತು ಕೇಳಿ ಅಭ್ಯರ್ಥಿ ಹಾಕಿದ್ದೇ ಕಾಂಗ್ರೆಸ್ ಹೀನಾಯ ಸೋಲಿಗೆ ಕಾರಣ: ಸಚಿವ ಡಾ. ಸುಧಾಕರ್

Pinterest LinkedIn Tumblr

ಬೆಂಗಳೂರು: ಜನರ ನಾಡಿ ಮಿಡಿತ ಅರಿಯದ ಅಭ್ಯರ್ಥಿಗಳನ್ನು ಹಾಕಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ ಎಂದು ಸಚಿವ ಡಾ. ಸುಧಾಕರ್ ಹೇಳಿದ್ದಾರೆ.

ಆರ್.ಆರ್. ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಸೋಲಿನ ಬಗ್ಗೆ ಟ್ವೀಟರ್ ಮೂಲಕ ಸುಧಾಕರ್ ವ್ಯಂಗ್ಯವಾಡಿದ್ದಾರೆ.

ಟ್ವೀಟ್ ಮಾಡಿರುವ ಅವರು,’ಜ್ಯೋತಿಷಿಗಳ ಮಾತು ಕೇಳಿ ಅಭ್ಯರ್ಥಿ ಹಾಕದೆ ಜನರ ನಾಡಿಮಿಡಿತ ಅರಿತು ಅಭ್ಯರ್ಥಿ ಹಾಕಿದ್ದರೆ ಬಹುಶಃ ಕಾಂಗ್ರೆಸ್ ಪಕ್ಷಕ್ಕೆ ಇಷ್ಟು ಹೀನಾಯ ಸೋಲು ಅನುಭವಿಸುವ ಪರಿಸ್ಥಿತಿ ಬರುತ್ತಿರಲಿಲ್ಲವೇನೋ. ಮುನಿರತ್ನ ಅವರ ಜನಪರ ಕಾರ್ಯಗಳು ಆರ್. ಆರ್ ನಗರದ ಜನತೆಯ ಮನ ಗೆದ್ದಿದ್ದು ಹ್ಯಾಟ್ರಿಕ್ ಗೆಲುವು ನೀಡುವ ಮೂಲಕ ಮತ್ತೊಮ್ಮೆ ಆಶೀರ್ವಾದ ಮಾಡಿದ್ದಾರೆ’ ಎಂದು ಬರೆದುಕೊಳ್ಳುವ ಮೂಲಕ ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Comments are closed.