ಉಡುಪಿ: ಕೊಂಕಣ ರೈಲ್ವೆ ಇಲಾಖೆಯಲ್ಲಿ ತಾನು ಟಿಸಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು ಇತರರ ಬಳಿ ಬಂದು ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಹಾಗೂ ದಾಖಲೆ ಪಡೆದು ವಂಚಿಸುತ್ತಿದ್ದ ಖತರ್ನಾಕ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಗಣೇಶ್ ನಾಯ್ಕ್ ಬಂಧಿತ ಆರೋಪಿ. ಈತ ಮಣಿಪಾಲ ಕೆ.ಎಂ.ಸಿ ಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿರುವ ವ್ಯಕ್ತಿಯೊಬ್ಬರು ಹಾಗೂ ಪರ್ಕಳ ಮಹಿಳೆಗೆ ಇದೇ ರೀತಿ ಯಾಮಾರಿಸಿದ್ದರು. ಈ ಪ್ರಕರಣದಲ್ಲಿ ಆರೋಪಿ ತಾನು ಕೊಂಕಣ ರೈಲ್ವೆ ಇಲಾಖೆಯಲ್ಲಿ ಟಿ.ಸಿ ಆಗಿ ಕೆಲಸ ಮಾಡಿಕೊಂಡಿದ್ದು ಎಂದು ಹೇಳಿಕೊಂಡು ಉಡುಪಿ ಜಿಲ್ಲೆ ಮತ್ತು ಹೊರ ಜಿಲ್ಲೆಗಳಲ್ಲಿ ಸಾರ್ವಜನಿಕರನ್ನು ನಂಬಿಸಿ ಅವರ ಬಳಿ ಹಣ ಮತ್ತು ದಾಖಲಾತಿಯ್ನ ಪಡೆದುಕೊಂಡ ವಂಚಿಸಿ ಸಾರ್ವಜನಿಕರಿಗೆ ಮೋಸ ಮಾಡಿದ್ದ.

ಈ ಬಗ್ಗೆ ಉಡುಪಿ ವೃತ್ತ ನಿರೀಕ್ಷಕರಾದ ಮಂಜುನಾಥ , ಉಡುಪಿ ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕಗಳಾದ ಸಕ್ತಿವೇಲು.ಇ ಮತ್ತು ವಾಸಪ್ಪ ನಾಯ್ಕ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ವಿಶೇಷ ತಂಡವನ್ನು ರಚಿಸಿ ಆರೋಪಿಯನ್ನು ಮಂಗಳವಾರ ಬಂಧಿಸಿಲಾಗಿದೆ. ಅರೋಪಿಯನ್ನು ಬಂಧಿಸುವಲ್ಲಿ ರೈಲ್ವೆ ಪೊಲೀಸ್ ಇನ್ಸ್‌ಪೆಕ್ಟರ್ ಸಂತೋಷ್ ಗಾಂವ್ಕರ್ ಹಾಗೂ ಸಿಬ್ಬಂದಿಗಳು ಸಹಕರಿಸಿದ್ದರು.
ಉಡುಪಿ ಎಸ್ಪಿ ಎನ್. ವಿಷ್ಣುವರ್ಧನ್ ಆದೇಶದಂತೆ ಹೆಚ್ಚುವರಿ ಎಸ್ಪಿ ಕುಮಾರಚಂದ್ರ, ಕಾರ್ಕಳ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಉಡುಪಿ ನಗರ ವೃತ್ತದ ಸಿ.ಪಿ.ಐ ಮಂಜುನಾಥ , ಉಡುಪಿ ನಗರ ಠಾಣೆಯ ಪಿಎಸ್‌ಐಗಳಾದ ಸಕ್ತಿವೇಲು.ಇ, ಮತ್ತು ವಾಸಪ್ಪ ನಾಯ್ಕ, ಸಿಬ್ಬಂದಿಯವರಾದ ಎಎಸ್‌ಐ ಹರೀಶ್, ಹೆಚ್‌ಸಿ ಲೋಕೇಶ್, ಹೆಚ್‌ಸಿ ರಿಯಾಝ್,ಅಹ್ಮದ್, ಹೆಚ್‌ಸಿ ಹರ್ಷ, ಹೆಚ್‌ಸಿ ಉಮೇಶ್, ಪಿಸಿ ಇಮ್ರಾನ್, ಪಿಸಿ ಸಂತೋಷ್ ರಾಠೋಡ್, ಪಿ.ಸಿ ವಿಶ್ವನಾಥ ಶೆಟ್ಟಿ , ಚಾಲಕರಾದ ರಾಘವೇಂದ್ರ ಮೊದಲಾದವರು ಈ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
(ವರದಿ- ಯೋಗೀಶ್ ಕುಂಭಾಸಿ)
Comments are closed.