ಕರಾವಳಿ

ಮಂಗಳೂರಿನಲ್ಲಿ ವಿವಿದೆಡೆ ನಡೆಯುತ್ತಿರುವ ರಸ್ತೆ ಕಾಮಗಾರಿಯಿಂದ ಟ್ರಾಫಿಕ್ ಸಮಸ್ಯೆ : ಶಾಸಕರಿಂದ ಬದಲಿ ವ್ಯವಸ್ಥೆ

Pinterest LinkedIn Tumblr

ಮಂಗಳೂರು : ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಯ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡದೆ ರಸ್ತೆ ಸಂಚಾರ ಬದಲಿಸಿರುವ ಅಧಿಕಾರಿಗಳ ವಿರುದ್ಧ ಸಾರ್ವಜನಿಕ ವಲಯದಿಂದ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಕರೆದು ಮಾಹಿತಿ ಪಡೆದುಕೊಂಡಿದ್ದೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.

ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆಯಲ್ಲಿ ರಸ್ತೆ ಬದಲಿಸಿದ ಕಾರಣ ಉಂಟಾದ ಟ್ರಾಫಿಕ್ ಸಮಸ್ಯೆಯ ಕುರಿತು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳ ಜೊತೆ ಸಭೆ ನಡೆಸಿ ಒಂದು ದಿನದಲ್ಲಿ ಸಮಸ್ಯೆ ಪರಿಹರಿಸುವ ಕಾರ್ಯದಲ್ಲಿ ಅಲ್ಪ ಮಟ್ಟಿಗೆ ಯಶಸ್ಸು ದೊರೆತಿದೆ.

ಅಧಿಕಾರಿಗಳು ಪ್ರಮುಖ ರಸ್ತೆಯಲ್ಲಿ ಕಾಮಗಾರಿ ಪ್ರಾರಂಭಿಸುವ ಮುನ್ನ ಸಾರ್ವಜನಿಕರಿಗೆ ಮಾಹಿತಿ ನೀಡದಿರುವ‌ ಕಾರಣ ಸಹಜವಾಗಿ ಗೊಂದಲ ಉಂಟಾಗಿತ್ತು. ಹಾಗಾಗಿ ಸೋಮವಾರವೇ ತುರ್ತು ಸಭೆ ನಡೆಸಿ ಸಾರ್ವಜನಿಕರು ಹಾಗೂ ಅಧಿಕಾರಿಗಳ ಅಭಿಪ್ರಾಯ ಪಡೆದುಕೊಂಡು ಬದಲಿಯ ವ್ಯವಸ್ಥೆಯ ಆದೇಶ ನೀಡಿದ್ದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ಸೋಮವಾರ ರಾತ್ರಿಯ ವೇಳೆಗೆ ಬದಲಿ ವ್ಯವಸ್ಥೆಯನ್ನು ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲನೆ ನಡೆಸಿ, ಟ್ರಾಫಿಕ್ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಿದ್ದೇನೆ. ಹಾಗೂ ತ್ವರಿತವಾಗಿ ಬಿಟ್ಟುಕೊಡಬಹುದಾದ ಕಡೆಗಳಲ್ಲಿ ರಾತ್ರಿಯ ವೇಳೆ ಕಾಮಗಾರಿ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆ ಕಾರಣಗಳಿಂದ ಒಂದೇ ದಿನದಲ್ಲಿ ಟ್ರಾಫಿಕ್ ಸಮಸ್ಯೆಯನ್ನು ಪರಿಹರಿಸಲು ಸಹಾಯಕವಾಗಿದೆ ಎಂದರು.

Comments are closed.