ಮಂಗಳೂರು ನವೆಂಬರ್ 14 : ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ರವರು ನವೆಂಬರ 14 ಮತ್ತು 15ರಂದು ದ.ಕ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ನವೆಂಬರ್14 ರಂದು ಸಂಜೆ 7 ಕ್ಕೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, ವಾಸ್ತವ್ಯ ಮಾಡಲಿದ್ದಾರೆ. ನವೆಂಬರ್ 15 ರಂದು ಬೆಳಿಗ್ಗೆ 10 ಕ್ಕೆ ಮಂಗಳೂರಿನ ಕೊಡಿಯಾಲ್ ಬೈಲ್ ಟಿ.ವಿ ರಮಣ ಪೈ ಕನ್ವೆನ್ಷನ್ ಹಾಲ್ ನಲ್ಲಿ 67ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕೋರೋನೋತ್ತರ ಸಹಕಾರ ಸಂಸ್ಥೆಗಳ ಜವಾಬ್ದಾರಿ ಮತ್ತು ಪಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 2.30ಕ್ಕೆ ಕುಲಶೇಖರ ಜಿಲ್ಲಾ ಸಹಕಾರ ಹಾಲು ಒಕ್ಕೂಟಕ್ಕೆ ಭೇಟಿ ನೀಡಿ ಪರಿಶೀಲನೆ ಹಾಗೂ 3.30ಕ್ಕೆ ಬೈಕಂಪಾಡಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ವಿಶೇಷ ಕರ್ತವ್ಯಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.