ಕರಾವಳಿ

ಮಂಗಳೂರು ವಿವಿ : ವಿವಿಧ ಸ್ನಾತಕೋತ್ತರ ಪ್ರವೇಶಾತಿ ಅವಧಿವಿಸ್ತರಣೆ

Pinterest LinkedIn Tumblr

ಮಂಗಳೂರು :ಪ್ರಸ್ತುತ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗಗಳು/ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು/ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು/ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಾಪ್ಪ ಕಾಲೇಜು, ಮಡಿಕೇರಿ/ ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳ (ಸರಕಾರಿ ಕೋಟದ ಸೀಟುಗಳಿಗೆ) ಮತ್ತು ಸರಕಾರಿ ಕಾಲೇಜುಗಳು ಇಲ್ಲಿ ನಡೆಸಲ್ಪಡುವ ವಿವಿಧ ಸ್ನಾತಕೋತ್ತರ ಕಾರ್ಯಕ್ರಮಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 16 ರ ವರೆಗೆ ವಿಸ್ತರಿಸಲಾಗಿದೆ.

ಪಿ.ಜಿ. ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕಾರ್ಯಕ್ರಮಗಳ ಭರ್ತಿ ಮಾಡಿದ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಪ್ರವೇಶ ಪರೀಕ್ಷೆ ಹಾಗೂ ಹೆಚ್ಚಿನ ಮಾಹಿತಿಗಳನ್ನು ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.mangaloreuniversity.ac.in ಸಂಪರ್ಕಿಸುವಂತೆ ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.