ಕರಾವಳಿ

ರಾಜ್ಯ ಮಟ್ಟದ ಸಹಾರ ಸಪ್ತಾಹದ ಪ್ರಯುಕ್ತ ಮಂಗಳೂರಿನಲ್ಲಿ “ಸಮುದಾಯದತ್ತ ಸಹಕಾರ ಜಾಥಾ”

Pinterest LinkedIn Tumblr

ಮಂಗಳೂರು, ನವೆಂಬರ್.14: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ 67ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ “ಸಹಕಾರಿ ಮಾರಾಟ, ಗ್ರಾಹಕ, ರೂಪಾಂತರ ಮತ್ತು ಮೌಲ್ಯವರ್ಧನೆ” ಎಂಬ ಧ್ಯೇಯದೊಂದಿಗೆ ಮಂಗಳೂರಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಬಾನುವಾರ ಹಮ್ಮಿಕೊಳ್ಳಲಾದ ರಾಜ್ಯ ಮಟ್ಟದ ಸಹಾರ ಸಪ್ತಾಹದ ಉದ್ಘಾಟನಾ ಸಮಾರಂಭಕ್ಕೂ ಮೊದಲು ಸಹಕಾರ ಜಾಥಾ ನಡೆಯಿತು.

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ನೇತ್ರತ್ವದಲ್ಲಿ ಅಯೋಜಿಸಲಾದ ರಾಜ್ಯ ಮಟ್ಟದ ಸಹಾರ ಸಪ್ತಾಹದ ಹಿನ್ನೆಲೆಯಲ್ಲಿ ಎಸ್‌ಸಿಡಿಸಿಸಿ ಪ್ರಧಾನ ಕಚೇರಿ ಮುಂಭಾಗದಿಂದ ಕಾರ್ಯಕ್ರಮ ನಡೆಯಲಿರುವ ಟಿ.ವಿ. ರಮಣ ಪೈ ಸಭಾಂಗಣದವರೆಗೆ “ಸಮುದಾಯದತ್ತ ಸಹಕಾರ ಜಾಥಾ” ಎಂಬ ಹೆಸರಿನೊಂದಿಗೆ ಜಾಥ ಸರಳ ರೀತಿಯಲ್ಲಿ ನಡೆಯಿತು.

ಸಮಾರಂಭ ಉದ್ಘಾಟಿಸಲು ಆಗಮಿಸಿದಂತಹ ಸಹಕಾರ ಸಚಿವ ಎಸ್‌ಟಿ. ಸೋಮಶೇಖರ್, ಅಥಿತಿಗಳಾದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಮೀನು ಮಾರಾಟ ಮಹಾ ಮಂಡಳದ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ಕೆಎಂಎಫ್ ಅಧ್ಯಕ್ಷ ರವಿರಾಜ ಹೆಗ್ಡೆ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ಮತ್ತಿತರ ಅಥಿತಿಗಳು ಜಾಥದಲ್ಲಿ ಭಾಗವಹಿಸಿದರು.

ಪ್ರಸಕ್ತ ಸಾಲಿನ ಸಹಕಾರ ಸಪ್ತಾಹ ಕಾರ್ಯಕ್ರಮ ನ. 14ರಿಂದ 20ರವರೆಗೆ ಪ್ರಸಕ್ತ ಸಾಲಿನ ಸಪ್ತಾಹವನ್ನು ಕೊರೊನೋತ್ತರ ಸಹಕಾರ ಸಂಘ ಗಳ ಜವಾಬ್ಧಾರಿ ಮತ್ತು ಪಾತ್ರ ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಳು ದಿನಗಳ ಕಾಲ ಕಾರ್ಯ ಕ್ರಮ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮ ಬೆಂಗಳೂರಿನಲ್ಲಿ ಹಾಗೂ ಸಮಾರೋಪ ಕಾರ್ಯಕ್ರಮವನ್ನು ಬಿಜಾಪುರದಲ್ಲಿ ನಡೆಸಲಾಗುವುದು.

Comments are closed.