(ಸಾಂದರ್ಭಿಕ ಚಿತ್ರ)
ಪಟಾಕಿ ಸಿಡಿಸಲು ಹೋಗಿ ಗಂಭೀರ ಗಾಯಗೊಂಡಿದ್ದ ಬಿಜೆಪಿ ಸಂಸದೆಯೊಬ್ಬರ ಮೊಮ್ಮಗಳು ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದಲ್ಲಿ ಸಂಭವಿಸಿದೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ ಬಿಜೆಪಿ ಸಂಸದೆ ರೀತಾ ಬಹುಗುಣ ಜೋಶಿ ಅವರ 8 ವರ್ಷದ ಮೊಮ್ಮಗಳು ಘಟನೆಯಲ್ಲಿ ಮೃತಪಟ್ಟಿದ್ದಾರೆ. ಬಾಲಕಿ ಮಂಗಳವಾರ ಬೆಳಿಗ್ಗೆ ಪಟಾಕಿ ಸಿಡಿಸುವಾಗ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ರೀತಾ ಬಹುಗುಣ ಅವರ ಪುತ್ರ ಮಾಯಾಂಕ್ ಜೋಷಿಯವರ ಪುತ್ರಿಯಾಗಿದ್ದ 8 ವರ್ಷದ ಮಗು ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ಹೊಡೆಯಲು ಆರಂಭಿಸಿದ್ದಳು. ಈ ವೇಳೆ ಮಗು ಗಂಭೀರವಾಗಿ ಗಾಯಗೊಂಡಿದೆ. ಬಾಲಕಿಯು ಶೇ.60ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದಳು.
ಕೂಡಲೇ ಬಾಲಕಿಯನ್ನು ಏರ್ ಆಯಂಬುಲೆನ್ಸ್ ಮೂಲಕ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಕ್ಷಣ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ.
ಸುದ್ಧಿ ತಿಳಿಯುತ್ತಿದ್ದಂತೆ ಅಪಾರ ಸಂಖ್ಯೆಯ ಜನರು ರೀಟಾ ಬಹುಗುಣ ಜೋಶಿ ಅವರ ನಿವಾಸಕ್ಕೆ ದೌಡಾಯಿಸಿದ್ದಾರೆ. ಬಾಲಕಿಯ ಸಾವು ಹಿನ್ನೆಲೆಯಲ್ಲಿ ಇದೀಗ ಸಂಸದೆ ರೀತಾ ಬಹುಗುಣ ಅವರ ಮನೆಯಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.