
ಬೆಂಗಳೂರು ಸೇರಿದಂತೆ ಹಲವೆಡೆಗಳಲ್ಲಿ ಧಾರಾಕರ ಸುರಿಯುತ್ತಿದ್ದು, ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಮುಂದಿನ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಕರಾವಳಿ ಭಾಗ ಮತ್ತು ಮಲೆನಾಡು ಪ್ರದೇಶದಲ್ಲಿ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಅಲ್ಲಲ್ಲಿ ಚದುರಿದ ಮಳೆಯಾಗಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲೆಲ್ಲಿ ಸಾಧಾರಣ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಉಪಗ್ರಹ ಚಿತ್ರದಲ್ಲೂ ಮಳೆಯಾಗುವ ಮುನ್ಸೂಚನೆ ಇದೆ. ಹಾಗೇ ತಮಿಳುನಾಡು ಮತ್ತು ಕೇರಳದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು, ಬೆಂ.ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರಿನಲ್ಲಿ ನ.18ರಿಂದ ನ.19ರವರೆಗೆ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ನ.18ರಿಂದ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Comments are closed.