ಕರಾವಳಿ

ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಕೋವಿಡ್ ವರದಿ ಕಡ್ಡಾಯ

Pinterest LinkedIn Tumblr

ಮಂಗಳೂರು ನವೆಂಬರ್ 19 : ಸಮಾಜ ಕಲ್ಯಾಣ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ನವೆಂಬರ್ 17 ರಿಂದ ಪ್ರಾರಂಭಿಸಲಾಗಿದೆ.

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಪೋಷಕರಿಂದ ಮುಚ್ಚಳಿಕೆ ಪತ್ರವನ್ನು ಹಾಗೂ ಕೋವಿಡ್ ಪರೀಕ್ಷೆಯ ನೆಗೆಟಿವ್ ವರದಿಯೊಂದಿಗೆ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.