ಕರಾವಳಿ

ರಾಜ್ಯದಲ್ಲಿ ಡಿಸೆಂಬರ್ ಅಂತ್ಯದವರೆಗೂ ಶಾಲೆ ಆರಂಭ ಇಲ್ಲ: ಮುಖ್ಯಮಂತ್ರಿ ಬಿಎಸ್‌ವೈ ಸ್ಪಷ್ಟನೆ

Pinterest LinkedIn Tumblr

ಬೆಂಗಳೂರು, ನವೆಂಬರ್.23: ರಾಜ್ಯದಲ್ಲಿ ಡಿಸೆಂಬರ್ ಅಂತ್ಯದವರೆಗೂ ಶಾಲೆ ಆರಂಭ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ರಾಜ್ಯದಲ್ಲಿ ಶಾಲೆ ಆರಂಭಿಸುವ ಕುರಿತಾಗಿ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಮಾಲೋಚನಾ ಸಭೆ ನಡೆದಿದ್ದು, ಸಿಎಂ ನೇತೃತ್ವದಲ್ಲಿ ಶಿಕ್ಷಣ ಸಚಿವರು, ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಯ್ತು. ಈ ವೇಳೆ ರಾಜ್ಯ ಸರ್ಕಾರ ಶಾಲೆ ಆರಂಭಿಸುವ ಕುರಿತು ಮಹತ್ವದ ತೀರ್ಮಾನ ಕೈಗೊಂಡಿದೆ.

ಸಭೆಯ ಬಳಿಕ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯದಲ್ಲಿ ಡಿಸೆಂಬರ್ ವರೆಗೂ ಶಾಲೆ ಆರಂಭ ಇಲ್ಲ. ಇಂತಹ ಸಂದರ್ಭದಲ್ಲಿ ಶಾಲೆ ಆರಂಭ ಮಾಡಿದರೆ ಕೊರೊನಾ ವೈರಸ್ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ಡಿಸೆಂಬರ್ ಅಂತ್ಯದವರೆಗೂ ಶಾಲೆ ಆರಂಭ ಇಲ್ಲ ಎಂದು ಹೇಳಿದ್ದಾರೆ.

ತಜ್ಞರ ಅಭಿಪ್ರಾಯ ಪರಿಗಣಿಸಿ ಡಿಸೆಂಬರ್ ವರೆಗೂ ಶಾಲೆ ತೆರೆಯದಿರಲು ನಿರ್ಧರಿಸಲಾಗಿದೆ. ಡಿಸೆಂಬರ್ ಕೊನೆ ವಾರದಲ್ಲಿ ಮತ್ತೊಮ್ಮೆ ಸಭೆ ಸೇರಿ ಶಾಲೆ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಅಂದ್ಹಾಗೆ, ಡಿಸೆಂಬರ್‌ ತಿಂಗಳಿನಲ್ಲಿ ಚಳಿ ಹೆಚ್ಚಿರುವುದರಿಂದ ಶ್ವಾಸಕೋಶದ ಕಾಯಿಲೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ವೆ. ಇನ್ನೂ ಕೊರೊನಾ ಸೋಂಕು ಹರಡುವಿಕೆಯ ಪ್ರಮಾಣ ಹೆಚ್ಚಾಗುವ ಸಧ್ಯತೆ ಇದೆ. ಹಾಗಾಗಿ ಡಿಸೆಂಬರ್‌ ತಿಂಗಳಲ್ಲಿ ಶಾಲೆ ತೆರೆಯುವುದು ಬೇಡ ಎಂದು ತಾಂತ್ರಿಕ ಸಲಹಾ ಸಮಿತಿ ತಜ್ಞರು ವರದಿ ಸಲ್ಲಿಸಿದ್ದರು.

.

Comments are closed.