ಕರ್ನಾಟಕ

ಬಹುಕೋಟಿ ವಂಚನೆ ಪ್ರಕರಣ: ಪ್ರಮುಖ ಆರೋಪಿ ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ಮತ್ತೊಮ್ಮೆ ಬಂಧನ

Pinterest LinkedIn Tumblr

ಬೆಂಗಳೂರು : ಬಹುಕೋಟಿ ವಂಚನೆ ಜಾಲ ಐಎಂಎ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ರೋಷನ್ ಬೇಗ್ ಬಂಧನದ ಬೆನ್ನಲ್ಲೇ ಪ್ರಕರಣದ ಪ್ರಮುಖ ಆರೋಪಿ ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ನನ್ನು ಸಿಬಿಐ ಅಧಿಕಾರಿಗಳು ಮತ್ತೊಮ್ಮೆ ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದಂತ ಬಹುಕೋಟಿ ವಂಚನೆ ಜಾಲ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಂತ ಮನ್ಸೂರ್ ಖಾನ್ ನ್ನು ಈ ಹಿಂದೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು.

ಆದರೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರೋಷನ್ ಬೇಗ್ ಅವರನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದು ಸಂದರ್ಭದಲ್ಲೇ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ನನ್ನು ಸಿಬಿಐ ಅಧಿಕಾರಿಗಳು ಎರಡನೇ ಬಾರಿ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಮನ್ಸೂರ್ ಖಾನ್ ನನ್ನು ಹೆಚ್ವಿನ ವಿಚಾರಣೆಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಸಿಬಿಐ ಬಳಿಕ ತನ್ನ ಕಸ್ಟಡಿಗೆ ಪಡೆದುಕೊಂಡಿದೆ. ವಿಚಾರಣೆ ನಡೆಸಿದ ಕೋರ್ಟ್ 5 ದಿನಗಳ ಕಾಲ ಅಂದರೆ ನವೆಂಬರ್ 7 ರವರೆಗೆ ಸಿಬಿಐ ವಶಕ್ಕೆ ನೀಡಿ ಆದೇಶ ನೀಡಿದೆ.

ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ರೋಷನ್ ಬೇಗ್ ಅವರನ್ನು ರವಿವಾರ ಬೆಳಗ್ಗೆ ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದ ಸಿಬಿಐ ಅಧಿಕಾರಿಗಳು ವಿಚಾರಣೆ ಬಳಿಕ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಧೀಶರು ರೋಷನ್ ಬೇಗ್ ಅವರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಮಾಡಿದ್ದರು.

ಅಂದು ಐಎಂಎ ವಂಚನೆ ಪ್ರಕರಣ ದಾಖಲಾಗುತ್ತಿದ್ದಂತೆ ಐಎಂಎ ಮುಖ್ಯಸ್ಥ ಮನ್ಸೂರ್ ಅಲಿ ಖಾನ್ ತಲೆಮರೆಸಿಕೊಂಡಿದ್ದ. ಬಳಿಕ ಅಜ್ಞಾತ ಸ್ಥಳದಿಂದ ಆಡಿಯೋ ಮಾಡಿ ಹರಿಯಬಿಟ್ಟು, ತನ್ನ ಬಳಿಯಿಂದ ರೋಷನ್ ಬೇಗ್ 400 ಕೋಟಿ ರೂ.ಪಡೆದು ಹಿಂದಿರುಗಿಸದೆ ವಂಚಿಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದರು.

ಮನ್ಸೂರ್ ಖಾನ್ ತನ್ನ ಆಡಿಯೋದಲ್ಲಿ ಬೇಗ್ ಮಾತ್ರವಲ್ಲದೇ ಹಲವು ರಾಜಕೀಯ ನಾಯಕರು ಮತ್ತು ಅಧಿಕಾರಿಗಳಿಗೂ ಹಣ ನೀಡಿದ್ದಾಗಿ ಉಲ್ಲೇಖಿಸಿದ್ದರು. ಐಎಂಎ ವಂಚನೆ ಕೇಸ್ ಬಗ್ಗೆ ಮೊದಲು ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡ(ಎಸ್‍ಐಟಿ), ವಿಚಾರಣೆಗೆ ಹಾಜರಾಗುವಂತೆ ಬೇಗ್‍ಗೆ ನೋಟಿಸ್ ನೀಡಿತ್ತು. ಆದರೆ, ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಕಳೆದ ವರ್ಷ ಜು.19ರಂದು ಎಸ್‍ಐಟಿಯು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಕಳುಹಿಸಿತ್ತು. ಇದೀಗ ಮನ್ಸೂರ್ ಖಾನ್ ನನ್ನು ಎರಡನೇ ಬಾರಿ ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ.

Comments are closed.