ಮಂಗಳೂರು, ನವೆಂಬರ್.24: ನಗರದ ಸ್ಥಳೀಯ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ನಗರದ ವಿಟಿ ರಸ್ತೆಯಲ್ಲಿರುವ ಸಂಸ್ಥೆಯ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ನಡೆದಿದೆ.
ನಗರದ ವಿ.ಟಿ.ರೋಡ್ ನ ಧನ್ವಂತರಿ ನಗರ ನಿವಾಸಿ ವಿಘ್ನೇಶ್ ನಾಯಕ್ (29) ಎಂಬಾತ ರವಿವಾರ ರಾತ್ರಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಘ್ನೇಶ್ ನಾಯಕ್ ಅವರಿಗೆ ವಿವಾಹ ನಿಶ್ಚಯವಾಗಿದ್ದು, ಕೆಲವೇ ದಿನಗಳಲ್ಲಿ ಮದುವೆಗೆ ದಿನ ನಿಗದಿ ಪಡಿಸಲಾಗಿತ್ತು. ಈ ಅವಧಿಯಲ್ಲಿ ಅತ್ಮಹತ್ಯೆ ಮಾಡಿಕೊಂಡಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
ಆತ್ಮಹತ್ಯೆ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರೇಮ ಪ್ರಕರಣ ಆತ್ಮಹತ್ಯೆಗೆ ಕಾರಣವಿರ ಬಹುದು ಎಂದು ಶಂಕಿಸಲಾಗಿದೆ. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮಾತ್ ಅವರು ಮೃತರ ಮನೆಗೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ.