ಕರಾವಳಿ

ಅಹ್ಮದ್ ಪಟೇಲ್ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ : ಪೂಜಾರಿ ಸಂತಾಪ

Pinterest LinkedIn Tumblr

ಮಂಗಳೂರು : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ರಾಜ್ಯಸಭಾ ಸದಸ್ಯ, ನನ್ನ ಆಪ್ತ ಮಿತ್ರರಾದ ಅಹ್ಮದ್ ಪಟೇಲ್ ರವರ ನಿಧನದ ವಾರ್ತೆ ಕೇಳಿ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನವು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಇಂದಿರಾ ಗಾಂಧಿ, ರಾಜೀವ್ ಗಾಂಧಿ ಯವರಿಗೆ ನಿಷ್ಠರಾಗಿದ್ದ ಅಹ್ಮದ್ ಪಟೇಲ್ ಅವರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಪರಮಾಪ್ತರಾಗಿದ್ದುಕೊಂಡು, ಪಕ್ಷಕ್ಕೆ ಸಲ್ಲಿಸಿದ ಸೇವೆ ಅವಿಸ್ಮರಣೀಯ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬದವರಿಗೂ, ಅಭಿಮಾನಿಗಳಿಗೂ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಪೂಜಾರಿ ತಿಳಿಸಿದ್ದಾರೆ.

Comments are closed.