ಕರಾವಳಿ

ಮಂಗಳೂರಿನಲ್ಲಿ ಇಂದು ಸಂಜೆ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ

Pinterest LinkedIn Tumblr

ಮಂಗಳೂರು : ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಮುಸ್ಲಿಮ್ ಲೇಖಕರ ಸಂಘವು ಕೊಡಮಾಡುವ 2018ನೇ ಸಾಲಿನ ರಾಜ್ಯ ಮಟ್ಟದ ದಿl ಯು.ಟಿ. ಫರೀದ್ ಸ್ಮರಣಾರ್ಥ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ ಮತ್ತು ಬಹುಭಾಷಾ ಕವಿಗೋಷ್ಠಿ ಇಂದು (ನ. 27) ಸಂಜೆ ನಡೆಯಲಿದೆ.

ಮಂಗಳೂರಿನ ರಾವ್ ಆಂಡ್ ರಾವ್ ಸರ್ಕಲ್ ಬಳಿಯ ಸಹಕಾರಿ ಸದನದಲ್ಲಿರುವ ಶಾಂತಿ ಪ್ರಕಾಶನ ಸಭಾಂಗಣದಲ್ಲಿ ಸಂಜೆ 4.00ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಶಾಸಕ ಯು.ಟಿ. ಖಾದರ್ ಪ್ರಶಸ್ತಿ ಪ್ರದಾನ ಮಾಡಲಿದ್ದು, ಅಬ್ದುಲ್ ಸಲಾಮ್ ದೇರಳಕಟ್ಟೆ (ಕೃತಿ: ಮರೀಚಿಕೆ) ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಹಂಪಿ ಕನ್ನಡ ವಿ.ವಿ.ಯ ವಿಶ್ರಾಂತ ಪ್ರಾಧ್ಯಾಪಕ ಡಾ. ಚಂದ್ರ ಪೂಜಾರಿ ಪ್ರಮುಖ ‌ಭಾಷಣ ಮಾಡಲಿದ್ದು, ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಹೆಚ್. ಅಧ್ಯಕ್ಷತೆ ವಹಿಸಲಿದ್ದಾರೆ.

ಮುಹಮ್ಮದ್ ಬಡ್ಡೂರು ಬಹುಭಾಷಾ ಕವಿಗೋಷ್ಠಿ ಉದ್ಘಾಟಿಸಲಿದ್ದು, ಅತ್ರಾಡಿ ಅಮೃತಾ ಶೆಟ್ಟಿ, ರಾಜಾರಾಮ ವರ್ಮ ವಿಟ್ಲ ಹಾಗೂ ಮೌ. ಇಮ್ರಾನುಲ್ಲಾ ಖಾನ್ ಮನ್ಸೂರಿ ಕವಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. ಬಿ.ಎ.ಮುಹಮ್ಮದ್ ಅಲಿ ಕಾರ್ಯಕ್ರಮ ನಿರ್ವಹಿಸಲಿದ್ದಾರೆ.

Comments are closed.