ಕರಾವಳಿ

ಸರಕಾರದ ಸೇವೆಗಳು ವಿಳಂಬವಿಲ್ಲದೆ ಸಕಾಲದಲ್ಲಿ ಜನ ಸಾಮಾನ್ಯರಿಗೆ ತಲುಪಿಸುವಂತೆ ಸೂಚನೆ

Pinterest LinkedIn Tumblr

ಮಂಗಳೂರು ನವೆಂಬರ್ 27: ಜನರಿಗೆ ನಿಗದಿತ ಕಾಲಮಿತಿಯಲ್ಲಿ ಸೇವೆಗಳನ್ನು ಒದಗಿಸುವ ಸಕಾಲ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜನರಿಗೆ ಅರಿವು ಮೂಡಿಸಲು ಸಕಾಲ ಸಪ್ತಾಹವನ್ನು ಆಚರಿಸಲಾಗುವುದು ಎಂದು ಸಕಾಲ ಯೋಜನೆಯ ಹೆಚ್ಚುವರಿ ಮಿಷನ್ ನಿರ್ದೇಶಕಿ ಡಾ. ಬಿ. ಆರ್ ಮಮತಾ ತಿಳಿಸಿದರು.

ಅವರು ರಾಜ್ಯದ ಎಲ್ಲಾ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳು, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡುತ್ತಿದ್ದರು.

ಸರಕಾರದ ಸೇವೆಗಳನ್ನು ವಿಳಂಬವಿಲ್ಲದೆ ಕಾಲಮಿತಿಯೊಳಗೆ ನೀಡುವ ಮಹತ್ವಾಕಾಂಕ್ಷೆಯೊಂದಿಗೆ ಕರ್ನಾಟಕ ನಾಗರಿಕ ಸೇವೆಗಳ ಖಾತ್ರಿ ಅಧಿನಿಯಮವನ್ನು 2012ರಲ್ಲಿ ಜಾರಿಗೆ ಜಾರಿಗೆ ತರಲಾಯಿತು ಎಂದರು.

2020 ನವೆಂಬರ್ 30 ರಿಂದ ಡಿಸೆಂಬರ್ 5 ರವರೆಗೆ ನಗರಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ, ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಸಾರಿಗೆ ಇಲಾಖೆಯಲ್ಲಿ, ಡಿಸೆಂಬರ್ 7 ರಿಂದ 12 ರವರೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ, ಡಿಸೆಂಬರ್ 14 ರಿಂದ ಡಿಸೆಂಬರ್ 19 ರವರೆಗೆ ಉಳಿದ ಎಲ್ಲಾ ಇಲಾಖೆಗಳಲ್ಲಿ ಸಪ್ತಾಹವನ್ನು ಆಚರಿಸಲಾಗುವುದು ಎಂದರು.

ಸಕಾಲ ಯೋಜನೆಯಡಿ ಒಟ್ಟು 98 ಇಲಾಖೆಗಳಲ್ಲಿ 1020 ಕ್ಕೂ ಹೆಚ್ಚಿನ ಸೇವೆಗಳನ್ನು ಸೇರ್ಪಡೆ ಮಾಡಲಾಗಿದೆ. ಈವರೆಗೆ ಸಕಾಲ ಯೋಜನೆಯಡಿ 22,88,81,652 ಅರ್ಜಿಗಳನ್ನು ಸ್ವೀಕರಿಸಿ, 22,82,55,866 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದರು.

ಈ ಯೋಜನೆಯ ಬಗ್ಗೆ ಜನರಿಗೆ ವ್ಯಾಪಕ ಪ್ರಚಾರ ಹಾಗೂ ಮಾಹಿತಿ ನೀಡಬೇಕು. ಇಲಾಖೆಗಳಲ್ಲ್ಲಿ ಅವಧಿ ಮೀರಿ ಬಾಕಿ ಉಳಿದ ಅರ್ಜಿಗಳ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಕಾನೂನಿನ ವ್ಯಾಪ್ತಿಯೊಳಗೆ ವಿಲೇವಾರಿ ಮಾಡಬೇಕು ಒಂದುವೇಳೆ ಅರ್ಜಿಗಳನ್ನು ತಿರಸ್ಕೃತಿ ಮಾಡಿದಲ್ಲಿ ಸೂಕ್ತ ಸಮರ್ಥನೆ ನೀಡಬೇಕು, ಸಂಬಂಧ ಪಟ್ಟ ಎಲ್ಲ ಕಚೇರಿಗಳಲ್ಲಿ ಸಕಾಲ ಸೇವೆಗಳ ಬಗ್ಗೆ ಮಾಹಿತಿಯ ಭಿತ್ತಿ ಪತ್ರವನ್ನು ಅಳವಡಿಸಬೇಕು ಎಂದರು.

ಜನರಿಗೆ ಅರ್ಜಿಯ ಬಗ್ಗೆ ಗೊಂದಲ ಅಥವಾ ಸಮಸ್ಯೆ ಉಂಟಾದರೆ ಸಕಾಲದಲ್ಲಿ ಅರ್ಜಿ ಸ್ವೀಕೃತಿ ಆಗುವ ಕಚೇರಿಗಳಲ್ಲಿ ಕಡ್ಡಾಯವಾಗಿ ಹೆಲ್ಪ್‍ಡೆಸ್ಕ್, ಸಹಾಯವಾಣಿಯನ್ನು ನಮೂದಿಸಬೇಕು. ಸಾರ್ವಜನಿಕರ ಅಭಿಪ್ರಾಯಗಳನ್ನು ಸಂಗ್ರಹಿಸಬೇಕು ಎಂದ ಅವರು ಅಪರ ಜಿಲ್ಲಾಧಿಕಾರಿಗಳು ಹಾಗೂ ಇತರ ಇಲಾಖಾ ಅಧಿಕಾರಿಗಳ ತಂಡ ರೂಪಿಸಿ ಕಚೇರಿಗಳಿಗೆ ಭೇಟಿ ನೀಡಿ ಪ್ರಕ್ರಿಯೆಯನ್ನು ಪರಿಶೀಲಿಸಬೇಕು ಎಂದು ಹೇಳಿದರು.

ಅರ್ಜಿದಾರರು 15 ಅಂಕಿಯಲ್ಲಿ ಜಿಎಸ್‍ಸಿ ಸಂಖ್ಯೆಯೊಂದಿಗೆ ಸ್ವೀಕೃತಿಯನ್ನು ಪಡೆಯಬೇಕು. ಇದರ ಮೂಲಕ ಅರ್ಜಿಯ ಪ್ರತಿಯೊಂದು ಹಂತವನ್ನು ಅರ್ಜಿದಾರರ ಮೊಬೈಲ್ ಸಂಖ್ಯೆಗೆ ಸಂದೇಶವನ್ನು ಕಳುಹಿಸಬೇಕೆಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕ ಅಶ್ವಿನ್ ಕುಮಾರ್ ರೈ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ಜಿಲ್ಲಾ ಯೋಜನಾ ನಿರ್ವಹಣಾಧಿಕಾರಿ ಅಕ್ಷತಾ ಎನ್, ಆಧಾರ್ ಸಮಾಲೋಚಕ ರಾಮಕೃಷ್ಣ, ಆಫೀಸ್ ಅಸಿಸ್ಟೆಂಟ್ ಅನಿತಾಲಕ್ಷ್ಮಿ, ಸಕಾಲ ಕನ್ಸ್‍ಟೆನ್ಸಿ ಭವ್ಯ ಮತ್ತಿತತರು ಉಪಸ್ಥಿತರಿದ್ದರು.

Comments are closed.