ಕರಾವಳಿ

ಕೋಟದಲ್ಲಿ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರೆ ದಾರುಣ ಮೃತ್ಯು, ಸಹಸವಾರೆ ಗಂಭೀರ

Pinterest LinkedIn Tumblr

ಉಡುಪಿ: ಕಾರು ಡಿಕ್ಕಿ ಹೊಡೆದಿದ್ದರಿಂದ ಸ್ಕೂಟರ್ ಸವಾರೆ ಮೃತಪಟ್ಟು, ಸಹ ಸವಾರೆ ಗಂಭೀರವಾಗಿ ಗಾಯಗೊಂಡ ಘಟನೆ ಕೋಟದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ.

ಮೃತರನ್ನು ಬೇಳೂರು ನಿವಾಸಿ ಶ್ರೇಯಾ ಶಾನುಭಾಗ್ (24) ಎಂದು‌ ಗುರುತಿಸಲಾಗಿದೆ. ಆಕೆಯ ಸ್ನೇಹಿತೆ ಉಜಿರೆ ಮೂಲದ ಕುಂದಾಪುರ ಕೋಡಿಯ ಪ್ರಜ್ಞಾ (25) ಎಂಬವರು ಗಂಭೀರವಾಗಿ ಗಾಯಗೊಂಡು ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಸ್ಕೂಟರ್ ಗೆ ಹಿಂದಿನಿಂದ ಬಂದ ಫಾರ್ಚುನರ್ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಶ್ರೇಯಾ ಉಡುಪಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತ ಬಳಿಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಕಾರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕೋಟ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Comments are closed.