ಕರಾವಳಿ

ಮುಸ್ಲಿಂ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ : ಡಿಸೆಂಬರ್ 9ರೊಳಗೆ ಇಲ್ಲಿಗೆ ಅರ್ಜಿ ಸಲ್ಲಿಸಿ

Pinterest LinkedIn Tumblr

ಮಂಗಳೂರು : ಪ್ರಸ್ತುತ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಬಿ.ಎಡ್/ಡಿ.ಎಡ್ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ವಿದ್ಯಾರ್ಥಿಗಳಿಗೆ ರೂ.25000 ಗಳ ವಿಶೇಷ ಪ್ರೋತ್ಸಾಹ ಧನಕ್ಕೆ ಡಿಸೆಂಬರ್ 9 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಪೋಷಕರ ವರಮಾನ ವಾರ್ಷಿಕ ಗರಿಷ್ಠ ರೂ. 6 ಲಕ್ಷ ಮೀರಿರಬಾರದು. ಹಿಂದಿನ ತರಗತಿಯಲ್ಲಿ ಶೇ 50 ಕ್ಕಿಂತ ಹೆಚ್ಚು ಅಂಕ ಪಡೆದಿರಬೇಕು. ಅರ್ಜಿಗಳನ್ನು ಭರ್ತಿಮಾಡಿ ಅಗತ್ಯ ದಾಖಲಾತಿಗಳೊಂದಿಗೆ ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೌಲಾನ ಆಜಾದ್ ಭವನ ಮೊದಲನೇ ಮಹಡಿ ಪಾಂಡೇಶ್ವರ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ -575001 ಇಲ್ಲಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂ. ಸಂಖ್ಯೆ 0824-2211078 ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.