ಕರ್ನಾಟಕ

ರೈತರ ಪ್ರತಿಭಟನೆ ಬಗ್ಗೆ ಕೆನಡಾ ಪ್ರಧಾನಿ ಹೇಳಿಕೆ ವ್ಯಾಪಕ ವೈರಲ್ : ಭಾರತದಲ್ಲಿ ಭಾರೀ ಆಕ್ರೋಷ

Pinterest LinkedIn Tumblr

ನವದೆಹಲಿ: ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಹೇಳಿಕೆ ನೀಡಿರುವ ಕೆನಡಾ ಪ್ರಧಾನಿ ಜಸ್ಟೀನ್ ಅವರ ವಿರುದ್ಧ ಭಾರೀ ಆಕ್ರೋಷ ವ್ಯಕ್ತವಾಗಿದ್ದು, ಇದೇ ವೇಳೆ ಭಾರತದ ಆಂತರಿಕ ವಿಚಾರಗಳಲ್ಲಿ ಕೆನಡಾ ಪ್ರಧಾನಿ ಮೂಗು ತೂರಿಸು ಅಗತ್ಯವಿಲ್ಲ ಎಂದು ಭಾರತ ತಿರುಗೇಟು ನೀಡಿದೆ.

ಕೇಂದ್ರ ಸರ್ಕಾರದ ಕೃಷಿ ಕಾಯಿದೆಗಳನ್ನು ವಿರೋಧಿಸಿ ದೇಶದಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಕೆನಡಾ ಪ್ರಧಾನಿ ಜಸ್ಟೀನ್ ಟ್ರಡೋ ಕಳವಳ ವ್ಯಕ್ತಪಡಿಸಿದ್ದು, ಜೊತೆಗೆ ರೈತರ ಪ್ರತಿಭಟನೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದರು.

ಪ್ರತಿಭಟಿಸುವ ಹಕ್ಕನ್ನು ಜನರಿಗೆ ನೀಡಬೇಕು. ಶಾಂತಿಯುತವಾಗಿ ಪ್ರತಿಭಟನೆ ನಡೆಯಬೇಕು. ಭಾರತದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಅವರಿಗೆ ಅವಕಾಶ ನೀಡಬೇಕು ಎಂದು ಪ್ರಧಾನಿ ಹೇಳಿರುವ ಮಾತು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗುತ್ತಿದ್ದು, ಹಲವಾರು ಮಂದಿ ಕೆನಡಾ ಪ್ರಧಾನಿಯಲ್ಲಿ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.

ಕೆನಡಾ ಪ್ರಧಾನಿ ಜಸ್ಟೀನ್ ಟ್ರುಡೋ ಹೇಳಿಗೆ ಭಾರತದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಭಾರತ ಅವರ ಹೇಳಿಕೆಗೆ ತೀಕ್ಷ್ಮವಾಗಿ ಪ್ರತಿಕ್ರಿಯಿಸಿದೆ. ಮೊದಲು ಈ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಭಾರತ, ಪ್ರಜಾಪ್ರಭುತ್ವ ರಾಷ್ಟ್ರದ ಆಂತರಿಕ ವ್ಯವಹಾರಗಳಿಗೆ ಸಂಬಂಧಿಸಿದ್ದಾಗಿರುವ ಕಾರಣ, ಇದಕ್ಕೆ ಒಂದು ವಿಷಯದ ಬಗ್ಗೆ ಅರ್ಧಂಬರ್ಧ ತಿಳಿದು ಈ ರೀತಿ ಹೇಳಿಕೆ ನೀಡುವುದು ಸಮಂಜಸವಲ್ಲ ಎಂದಿದೆ.

ಭಾರತದ ಆಂತರಿಕ ವಿಚಾರಗಳಲ್ಲಿ ಕೆನಡಾ ಪ್ರಧಾನಿ ಜಸ್ಟೀನ್ ಟ್ರುಡೋ ಮೂಗು ತೂರಿಸಿರುವುದು ಸರಿಯಲ್ಲ. ರಾಜಕೀಯ ಉದ್ದೇಶಗಳಿಗಾಗಿ ಇವುಗಳನ್ನು ಬಳಸಿಕೊಳ್ಳಬಾರದು ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾತ್ಸವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟ್ರೂಡೊ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶಿವಸೇನೆ ಸಂಸದರಾದ ಪ್ರಿಯಾಂಕಾ ಚತುರ್ವೇದಿ ‘ರೈತರ ಬಗ್ಗೆ ನಿಮ್ಮ ಕಾಳಜಿಯಿಂದ ಖುಷಿಯಾಗಿದೆ. ಆದರೆ ಭಾರತದ ಆಂತರಿಕ ಸಮಸ್ಯೆ ಮತ್ತೊಂದು ರಾಷ್ಟ್ರದ ರಾಜಕೀಯಕ್ಕೆ ಮೇವು ಅಲ್ಲ. ನಾವು ಯಾವಾಗಲೂ ಇತರ ರಾಷ್ಟ್ರಗಳ ಸೌಜನ್ಯವನ್ನು ಗೌರವಿಸುತ್ತೇವೆ’ ಎಂದು ಹೇಳಿದರು. ಇದೇ ವೇಳೆ ಈ ಬಿಕ್ಕಟ್ಟನ್ನು ಆದಷ್ಟು ಬೇಗ ಪರಿಹರಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವರು ಮನವಿ ಮಾಡಿದರು. ಬೇರೆ ದೇಶಗಳಿಗೆ ಈ ವಿಷಯ ಆಹಾರ ಆಗುವುದು ಬೇಡ ಎಂದಿದ್ದಾರೆ.

ಕಳೆದ ಆರು ದಿನಗಳಿಂದಲೂ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಕೆನಡಾ ಪ್ರಧಾನಿ ಜಸ್ಟೀನ್ ಟ್ರಡೋ ಕಳವಳ ವ್ಯಕ್ತಪಡಿಸಿದ್ದು, ಜೊತೆಗೆ ರೈತರ ಪ್ರತಿಭಟನೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದರು.

ಭಾರತದ ಆಂತರಿಕ ವಿಚಾರಗಳಲ್ಲಿ ನೀವ್ಯಾಕೆ ಮೂಗು ತೂರಿಸುತ್ತಿದ್ದೀರಿ ಎಂದು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮ್ಮ ದೇಶದಲ್ಲಿಯೇ ಮಾಡುವುದು ಬೇಕಾದಷ್ಟಿದೆ. ಮೊದಲು ಅವುಗಳನ್ನು ಸರಿ ಮಾಡಿ, ಆಮೇಲೆ ಬೇರೆ ದೇಶದಲ್ಲಿ ಏನಾಗುತ್ತಿದೆ ಎಂಬ ಬಗ್ಗೆ ಟೀಕೆ ಮಾಡಿ ಎಂದು ಕಮೆಂಟಿಗರು ಪ್ರತಿಕ್ರಿಯೆ ನೀಡಿದ್ದಾರೆ.

Comments are closed.