ಕರಾವಳಿ

ಕುಂದಾಪುರ ಅರಣ್ಯಾಧಿಕಾರಿಗಳ ಕಾರ್ಯಾಚರಣೆ: ಆಟೋ ರಿಕ್ಷಾದಲ್ಲಿ ಶ್ರೀಗಂಧ ದಾಸ್ತಾನಿಟ್ಟ ಆರೋಪಿ ಬಂಧನ

Pinterest LinkedIn Tumblr

ಕುಂದಾಪುರ: ನೋಂದಣಿ ಆಗದ ಆಟೋ ರಿಕ್ಷದಲ್ಲಿ ಶ್ರೀಗಂಧ ಮರದ ತುಂಡುಗಳನ್ನು ದಾಸ್ತಾನು ಮಾಡಿದ್ದ ಆರೋಪಿಯನ್ನು ಕುಂದಾಪುರ ವಲಯ ಅರಣ್ಯಾಧಿಕಾರಿಗಳ ತಂಡ ಬಂಧಿಸಿ ಗಂಧ ಸಮೇತ ಆಟೋ ವಶಕ್ಕೆ ಪಡೆದಿದ್ದಾರೆ.

ವಂಡ್ಸೆ ಸಮೀಪದ ನಿವಾಸಿ ರಾಜೇಶ್ (34) ಬಂಧಿತ ಆರೋಪಿ.

ಅರಣ್ಯಾಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯಂತೆ ವಂಡ್ಸೆ ಗ್ರಾಮದ ಹಕ್ಲುಮನೆ ಎಂಬಲ್ಲಿ ಆಟೋ ರಿಕ್ಷಾವೊಂದರಲ್ಲಿ ಶೇಖರಿಸಿದ್ದ 3.8 ಕೆಜಿಯಷ್ಟು ಗಂಧದ ಕೊರಡುಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೇಶ್ ಎನ್ನುವ ಆರೋಪಿಯನ್ನು ವಶಕ್ಕೆ ಪಡೆದು ನಡೆಸಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ್ ಕುಲಾಲ್, ಉಪವಲಯ ಅರಣ್ಯಾಧಿಕಾರಿ ಹೇಮಾ, ಶರತ್ ಗಾಣಿಗ,ಅರಣ್ಯ ರಕ್ಷಕ ದೇವಿಪ್ರಸಾದ್, ಉದಯ್ ವಂಡ್ಸೆ ಹಾಗೂ ಚಾಲಕ ಅಶೋಕ್ ಈ ಕಾರ್ಯಾಚರಣೆಯಲ್ಲಿದ್ದರು.

(ವರದಿ- ಯೋಗೀಶ್ ಕುಂಭಾಸಿ)

Comments are closed.