
ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಕೊರೊನಾ ಕಾರಣದಿಂದ ಈ ರೈಲು ರದ್ದಾಗಿತ್ತು. ಆದರೆ ಕರಾವಳಿಯ ಪ್ರಯಾಣಿಕರು ಈ ರೈಲಿನ ಮೂಲಕ ಬೆಂಗಳೂರನ್ನು ಸಂಪರ್ಕಿಸಲು ಸುಲಭ ಸಾಧ್ಯವಾಗಿರುವುದರಿಂದ ಎರಡು ಜಿಲ್ಲೆಗಳಲ್ಲಿ ವಾಸಿಸುವ ಕರಾವಳಿಗರಿಗ ರೈಲಿನ ಅವಶ್ಯಕತೆಯನ್ನು ಮನಗಂಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ರೈಲ್ವೆ ಸಚಿವರೊಂದಿಗೆ ಮತ್ತು ರೈಲ್ವೆ ಅಧಿಕಾರಿಗಳೊಂದಿಗೆ ಸಂವಹನ ನಡೆಸಿ ಈ ರೈಲು ಮತ್ತೆ ಸಂಚರಿಸುವಂತೆ ಸೂಕ್ತ ಕ್ರಮ ಕೈಗೊಂಡಿದ್ದಾರೆ.
Comments are closed.