ಕರಾವಳಿ

ಮಂಗಳೂರು : ಉಗ್ರರ ಪರ ಗೋಡೆ ಬರಹ ಬರೆದ ಪ್ರಕರಣ – ಓರ್ವ ಪೊಲೀಸ್ ವಶಕ್ಕೆ – ಇನ್ನಿಬ್ಬರಿಗಾಗಿ ಶೋಧ!

Pinterest LinkedIn Tumblr

ಬಿಜೈ ಬಳಿಯ ರಸ್ತೆಯ ಗೋಡೆ

ಮಂಗಳೂರು, ಡಿಸೆಂಬರ್.3: ಕೆಲವು ದಿನಗಳ ಹಿಂದೆ ನಗರದ ಪ್ರತ್ಯೇಕ ಸ್ಥಳಗಳಲ್ಲಿ ಉಗ್ರರ ಪರ ಗೋಡೆ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ನಝೀರ್ ಮುಹಮ್ಮದ್ ಆಗಾ (26)ಎಂದು ಗುರುತಿಸಲಾಗಿದೆ. ಈತ ನಗರದಲ್ಲಿ ಆನ್ಲೈನ್ ಫುಡ್ ಡೆಲಿವರಿ ಕೆಲಸ ಮಾಡಿಕೊಂಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಕೋರ್ಟ್ ಪ್ರಿಮಿಸಸ್‌ನ ಹಳೇ ಪೊಲೀಸ್ ಔಟ್ ಪೋಸ್ಟ್‌ನ ಗೋಡೆ

ನಗರದ ಬಿಜೈ ಮತ್ತು ಕೋರ್ಟ್ ಸಮೀಪ ಕೆಲದಿನಗಳ ಹಿಂದೆ ಕಂಡು ಬಂದ ಉಗ್ರ ಬರಹ ಕಂಡು ಬಂದಿತ್ತು. ಆರೋಪಿಯನ್ನು ಮೊಬೈಲ್ ದಾಖಲೆ ಆಧಾರದಲ್ಲಿ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆಗೊಳಪಡಿಸಲಾಗಿದೆ. ಖಚಿತ ಮಾಹಿತಿಗಳ ಪ್ರಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಇನ್ನಿಬ್ಬರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ತಿಳಿದು ಬಂದಿದೆ.

ನ.27ರಂದು ಪ್ರಥಮ ಪ್ರಕರಣ :

ನ.27ರಂದು ಕದ್ರಿ‌ ಪೊಲೀಸ್ ಠಾಣೆ ಸಮೀಪದ ಬಿಜೈ ಬಳಿಯ ರಸ್ತೆಯ ಗೋಡೆಯೊಂದರಲ್ಲಿ “ನಮ್ಮನ್ನು ವಿದ್ವಂಸಕ ಕೃತ್ಯ ನಡೆಸಲು ಉತ್ತೇಜಿಸಲು ಬರಬೇಡಿ, ಲಷ್ಕರ್ ಇ ತೊಯಿಬಾ ಮತ್ತು ತಾಲಿಬಾನ್ ಗಳಿಗೆ ಸಂಘಿಗಳನ್ನು ಯಾವ ರೀತಿ ನೋಡಿಕೊಳ್ಳಬೇಕು ಎನ್ನುವುದು ತಿಳಿದಿದೆ.” ಅಲ್ಲದೆ ‘ಲಷ್ಕರ್ ಝಿಂದಾಬಾದ್’ ಎಂದು ಬರೆಯಲಾಗಿತ್ತು.

“Do not force us to invite Lashkar-e-Toiba and Taliban to Deal with Sanghis and Manvedis” ಎಂದು ಉಗ್ರರ ಪರವಾಗಿ ಕಿಡಿಗೇಡಿಗಳು ಬರೆದಿದ್ದರು. ಅಷ್ಟೇ ಅಲ್ಲದೇ ಹ್ಯಾಷ್ ಟ್ಯಾಗ್ ಹಾಕಿ, “ಲಷ್ಕರ್‌‌ ಜಿಂದಾಬಾದ್”‌‌‌‌‌ ಎಂದು ಬರೆಯಲಾಗಿತ್ತು. ಬಳಿಕ ಕದ್ರಿ ಪೊಲೀಸರು ವಿವಾದಿತ ಬರಹದ ಮೇಲೆ ಪೈಂಟ್‌ ಬಳಿದು ಅದನ್ನು ಅಳಿಸಿ ಹಾಕಿದ್ದಾರೆ.

ಬಳಿಕ ನ.29ರಂದು ನಗರದ ಪಿವಿಎಸ್ ಸಮೀಪದ ನ್ಯಾಯಾಲಯದ ಆವರಣದ ಹಳೆ ಕಟ್ಟಡದ ಗೋಡೆಯ ಮೇಲೆ “Gustak e rasool ek hi saza tan say juda” ಎಂದು ಬರಹ ಪ್ರತ್ಯಕ್ಷವಾಗಿತ್ತು.

ನಗರದ ಕೋರ್ಟ್ ರೋಡ್‌ನಲ್ಲಿ ಕೋರ್ಟ್‌ಗೆ ಸಮೀಪವಾಗಿರುವ ಕೋರ್ಟ್ ಪ್ರಿಮಿಸಸ್‌ನ ಹಳೇ ಪೊಲೀಸ್ ಔಟ್ ಪೋಸ್ಟ್‌ನ ಗೋಡೆಯ ಮೇಲೆ ಕಿಡಿಗೇಡಿಗಳು ಉರ್ದು ಭಾಷೆಯಲ್ಲಿ ‘Gustuk e Rasool ek hi saza sar tan say juda’ ಅಂದರೆ, “ಪ್ರವಾದಿಗೆ ಕೋಪ ಬಂದರೆ ಒಂದೇ ಶಿಕ್ಷೆ, ಅದು ತಲೆ ದೇಹದಿಂದ ಬೇರ್ಪಡುವುದು” ಎಂಬ ವಿವಾದಾತ್ಮಕ ಬರಹವನ್ನು ಬರೆದಿದ್ದಾರೆ. ಕಪ್ಪು ಬಣ್ಣದ ಪೈಂಟ್ ಬಳಸಿ ರಾತ್ರಿ ವೇಳೆ ಬರೆಯಲಾಗಿದ್ದು, ರವಿವಾರ ಬೆಳಗ್ಗೆ ವಿಷಯ ಬೆಳಕಿಗೆ ಬಂದಿದೆ.

ಈ ಬಗ್ಗೆ ಕದ್ರಿ ಹಾಗೂ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದ ಬಗ್ಗೆ ಮೂರು ಪ್ರತ್ಯೇಕ ಪೊಲೀಸ್‌ ತಂಡಗಳು ವಿವಿಧ ಆಯಾಮಗಳಿಂದ ತನಿಖೆ ಕೈಗೊಂಡಿದ್ದ ಪೊಲೀಸರು ಇಂದು ಮುಂಜಾನೆ ಓರ್ವನನ್ನು ವಶಕ್ಕೆ ಪಡೆದಿದ್ದು ವಿಚಾರಣೆಗೊಳಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Comments are closed.